Horoscope Today- ದಿನ ಭವಿಷ್ಯ; ಈ ರಾಶಿಯವರು ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ
Horoscope ಮೇ 10, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣಪಕ್ಷ, ಚತುರ್ದಶಿ ತಿಥಿ, ಸೋಮವಾರ, ಮೇ 10, 2021. ಅಶ್ವಿನಿ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 07.22 ರಿಂದ ಇಂದು ಬೆಳಿಗ್ಗೆ 8.58ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.46. ಸೂರ್ಯಾಸ್ತ: ಸಂಜೆ 6.38.
ತಾ.10-05-2021 ರ ಸೋಮವಾರದ ರಾಶಿಭವಿಷ್ಯ
ಮೇಷ: ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ. ವೈವಾಹಿಕ ಚಿಂತೆ ಇರುವುದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ದರ್ಶನ ಯೋಗವಿದೆ. ಶುಭ ಸಂಖ್ಯೆ: 9
ವೃಷಭ: ಎಲ್ಲವೂ ಇದ್ದಂತೆ ಇರಲಿ ಎಂಬ ಮನೋಭಾವನೆ ಇರುವುದು. ಕೆಲಸದಲ್ಲಿ ಬದಲಾವಣೆ ತರಲು ಪ್ರಯತ್ನಿಸಿ. ವಿದೇಶ ಪ್ರಯಾಣದ ಯೋಗವಿದೆ .ಉದ್ಯೋಗದಲ್ಲಿ ಪ್ರಗತಿ ಮುಂದುವರೆಯುವುದು. ಶುಭ ಸಂಖ್ಯೆ: 2
ಮಿಥುನ: ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವವು. ಸಂಭಂಧಿಗಳಿಂದ ಸಹಕಾರ ದೊರೆಯುವದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 5
ಕಟಕ: ಹಳೆಯ ಸಾಲ ಮರುಪಾವತಿಯಾಗುವುದು. ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವವಿದೆ. ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಎದುರಾಡುವ ಸಂಭವವಿದೆ. ಶುಭ ಸಂಖ್ಯೆ: 7
ಸಿಂಹ: ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು. ಶುಭ ಸಂಖ್ಯೆ: 4
ಕನ್ಯಾ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 8
ತುಲಾ: ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕಠಿಣ ಪರಿಸ್ಥಿತಿಯಲ್ಲಿಯೂ ದುರ್ಲಭ ಸಾಧನೆ ಮಾಡುವಿರಿ. ಪರಿವಾರದಲ್ಲಿ ಸಂತಸವಿರುವುದು. ಕೇಡುಬಯಸುವ ಜನರಿಗೆ ಅಂಜದೇ ಮುಂದುವರಿಯಿರಿ. ಶುಭ ಸಂಖ್ಯೆ: 1
ವೃಶ್ಚಿಕ: ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವುದು. ಸತತ ಪ್ರಯತ್ನವಿಲ್ಲದೇ ಫಲ ದೊರೆಯಲಾರದು. ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬುದ್ದಿಯಿಂದ ತಾಳ್ಮೆಕಳೆದುಕೊಳ್ಳದೇ ಮುಂದುವರೆಯಿರಿ. ಶುಭ ಸಂಖ್ಯೆ: 3
ಧನು: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 6
ಮಕರ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 9
ಕುಂಭ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 3
ಮೀನ: ವ್ಯವಹಾರಿಕ ಏಳ್ಗೆ ಇರುವುದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ.ವಿವಿಧ ಸೌಭಾಗ್ಯಪ್ರಾಪ್ತಿ..ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್,ವಾಹನ,ಮಶಿನರಿಗಳಿಂದ ತೊಂದರೆ. ಶುಭ ಸಂಖ್ಯೆ: 4