ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣಪಕ್ಷ, ಅಮಾವಾಸ್ಯೆ ತಿಥಿ, ಮಂಗಳವಾರ, ಮೇ 11, 2021. ಭರಣಿ ನಕ್ಷತ್ರ, ರಾಹುಕಾಲ: ಇಂದು ಸಂಜೆ 03.25 ರಿಂದ ಇಂದು ಸಂಜೆ 5.01 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.45. ಸೂರ್ಯಾಸ್ತ: ಸಂಜೆ 6.39.
ತಾ.11-05-2021 ರ ಮಂಗಳವಾರದ ರಾಶಿಭವಿಷ್ಯ
ಮೇಷ: ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 3
ವೃಷಭ: ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ. ಶುಭ ಸಂಖ್ಯೆ: 7
ಮಿಥುನ: ಮಾತಿನಂತೆ ನಡೆದುಕೊಳ್ಳುವ ಪ್ರಯತ್ನ ಮಾಡುವಿರಿ. ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಕೆಲಸ ನಿರ್ವಹಿಲು ಆಗದಂತಹ ಸ್ಥಿತಿ ಬರಬಹುದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 9
ಕಟಕ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 1
ಸಿಂಹ: ಮಾನಸಮ್ಮಾನಗಳು ದೊರೆಯುವವು. ಕಂಕಣಬಲ ಕೂಡಿಬರುವುದು. ಮನೋಭಿಲಾಷೆಗಳು ಈಡೇರುವವು. ಆದರೆ ಉದ್ಯೋಗದಲ್ಲಿ ನಿರಾಸಕ್ತಿ ಇರುವುದು ಮತ್ತು ವ್ಯವಹಾರದಲ್ಲಿ ಅಸಮಾಧಾನ ಕಂಡುಬರುವುದು. ಶುಭ ಸಂಖ್ಯೆ: 3
ಕನ್ಯಾ: ಕೃಷಿಮೂಲದ ಲಾಭ ದೊರೆಯುವುದು. ಸಹೋದ್ಯೋಗಿಗಳ ಸಹಾಯ ಅಪೃಕ್ಷಿಸದೇ ಸ್ವಂತಬಲದಿಂದ ಕೆಲಸ ನಿರ್ವಹಿಸಿರಿ. ಕೈಗೊಂಡ ಕಾರ್ಯಗಳು ಯಶಸ್ವಿಯಾಗುವವು. ನೌಕರರಿಗೆ ಕಿರಿಕಿರಿಯಾಗುವ ಸಂಭವವಿದೆ. ಶುಭ ಸಂಖ್ಯೆ: 6
ತುಲಾ: ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಉನ್ನತ ಶಿಕ್ಷಣದ ಕನಸು ಈಡೇರುವುದು. ಶುಭ ಸಂಖ್ಯೆ: 5
ವೃಶ್ಚಿಕ: ಸಹನೆ ಇಲ್ಲದ ಆತುರದ ನಡೆಯಿಂದ ಹಾನಿ ಸಂಭವ ಎಚ್ಚರಿಕೆ ವಹಿಸಿರಿ. ಅನೀರೀಕ್ಷಿತವಾಗಿ ಬರುವ ವಿಘ್ನಗಳು ತಾವಾಗಿಯೇ ಪರಿಹಾರ ಕಾಣುವವು. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಶುಭ ಸಂಖ್ಯೆ: 2
ಧನು: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 4
ಮಕರ: ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 7
ಕುಂಭ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 3
ಮೀನ: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವುದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವದು. ಶುಭ ಸಂಖ್ಯೆ: 1