Horoscope Today- ದಿನ ಭವಿಷ್ಯ; ಈ ರಾಶಿಯವರು ಅಪಮಾನ, ಅಪವಾದದಂತಹ ಸಮಸ್ಯೆಗೆ ಸಿಲುಕದಂತೆ ಜಾಗರೂಕರಾಗಿರಿ

Horoscope ಮೇ 12, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರು ಅಪಮಾನ, ಅಪವಾದದಂತಹ ಸಮಸ್ಯೆಗೆ ಸಿಲುಕದಂತೆ ಜಾಗರೂಕರಾಗಿರಿ
ದಿನ ಭವಿಷ್ಯ
Follow us
ಆಯೇಷಾ ಬಾನು
|

Updated on: May 12, 2021 | 6:33 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲಪಕ್ಷ, ಪಾಡ್ಯ ತಿಥಿ, ಬುಧವಾರ, ಮೇ 12, 2021. ಕೃತ್ತಿಕೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.12 ರಿಂದ ಇಂದು ಮಧ್ಯಾಹ್ನ 1.48 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.45. ಸೂರ್ಯಾಸ್ತ: ಸಂಜೆ 6.39.

ತಾ.12-05-2021 ರ ಬುಧವಾರದ ರಾಶಿಭವಿಷ್ಯ

ಮೇಷ: ಅಪಮಾನ, ಅಪವಾದದಂತಹ ಸಮಸ್ಯೆಗೆ ಸಿಲುಕದಂತೆ ಜಾಗರೂಕರಾಗಿರಿ. ಈ ಸಮಯದಲ್ಲಿ ಮಾತನಾಡುವ ಬದಲು ಮಾತು ಕೇಳುವುದು ಉತ್ತಮ. ಮಕ್ಕಳು ಶಾಲಾ ಕಾಲೇಜುಗಳಲ್ಲಿ ಸಾಧನೆ ತೋರುವರು. ಶುಭ ಸಂಖ್ಯೆ: 6

ವೃಷಭ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರವೃದ್ಧಿಯಾಗುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 2

ಮಿಥುನ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 8

ಕಟಕ: ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ. ಸಾಧನೆಗೆ ಸೂಕ್ತ ಅವಕಾಶ ದೊರೆಯುವುದು. ಹಣಕಾಸಿನ ತೊಂದರೆಗಳು ಪರಿಹಾರವಾಗುವವು. ವ್ಯವಹಾರಗಳಲ್ಲಿ ಗೌಪ್ಯತೆ ಇರಲಿ. ಹಿತಶತ್ರುಗಳಿಂದ ತೊಂದರೆಯಾಗುವ ಸಧ್ಯತೆ ಇದೆ. ಶುಭ ಸಂಖ್ಯೆ: 1

ಸಿಂಹ: ಅನಿಸಿಕೆಗಿಂತ ವಾಸ್ತವ ಬೇರೆ ಇರುವುದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವುದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭ ಸಂಖ್ಯೆ: 4

ಕನ್ಯಾ: ಸಾಲಗಾರರ ತೊಂದರೆ ಇರುವುದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವುದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ. ಶುಭ ಸಂಖ್ಯೆ: 7

ತುಲಾ: ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವವು. ಶುಭ ಸಂಖ್ಯೆ: 3

ವೃಶ್ಚಿಕ: ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ. ಶುಭ ಸಂಖ್ಯೆ: 7

ಧನು: ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಕ ಸಂಕಷ್ಟಗಳು ಎದುರಾಗುವವು. ಶುಭ ಸಂಖ್ಯೆ: 4

ಮಕರ: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವುದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು. ಶುಭ ಸಂಖ್ಯೆ: 9

ಕುಂಭ: ಅಪರಿಮಿತ ಖರ್ಚು ತೋರಿದರೂ ಅಡಚಣೆಯಾಗುವ ಸಂಭವವಿಲ್ಲದೆ. ಸ್ಥಾನಮಾನಗಳೂ ಭದ್ರವಾಗಿ ಸಾಂಸಾರಿಕ ದೃಷ್ಟಿಯಲ್ಲೂ ಸುಖದಾಯಕ, ವಿಶೇಷ ಪ್ರಯತ್ನದಿಂದ ವ್ಯವಹಾರ ಸಿದ್ಧಿ ಇರುವುದು. ಶುಭ ಸಂಖ್ಯೆ: 2

ಮೀನ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವುದು. ಉತ್ಸಾಹ ಮೂಡುವುದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ: 5

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು