Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು

| Updated By: Skanda

Updated on: May 13, 2021 | 6:40 AM

ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲಪಕ್ಷ, ಬಿದಿಗೆ ತಿಥಿ, ಗುರುವಾರ, ಮೇ 13, 2021 ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯವರಿಗೆ ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲಪಕ್ಷ, ಬಿದಿಗೆ ತಿಥಿ, ಗುರುವಾರ, ಮೇ 13, 2021. ರೋಹಿಣಿ ನಕ್ಷತ್ರ, ರಾಹುಕಾಲ: ಇಂದು ರಾತ್ರಿ 8:43 ರಿಂದ ಇಂದು ರಾತ್ರಿ 10:31 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.44. ಸೂರ್ಯಾಸ್ತ: ಸಂಜೆ 6.39.

ತಾ.13-05-2021 ರ ಗುರುವಾರದ ರಾಶಿಭವಿಷ್ಯ.
**

ಮೇಷ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 6

ವೃಷಭ: ಯಾವದೇ ಅಡೆತಡೆ ಇಲ್ಲದ ನಿರಾತಂಕ ಜೀವನ ಇರುವುದು. ಸಾಮಜಿಕ ಕಾರ್ಯಗಳಿಂದ ಗೌರವಾದರಗಳು ದೊರೆಯುವವು. ಆಶೆಗೆ ತಕ್ಕಂತೆ ಫಲಗಳು ಕೈಗೂಡುವವು. ಬಂಧುಗಳಲ್ಲಿ ಮನಸ್ತಾಪ ಕಂಡುಬರುವುದು. ಶುಭ ಸಂಖ್ಯೆ: 1

ಮಿಥುನ: ಧನಮದಕ್ಕಿಂತ ವಿದ್ಯಾಮದ ಅಪಾಯಕಾರಿ ಆದರಿಂದ ತೊಂದರೆ ಆಗುವ ಸಾಧ್ಯತೆ ಇದೆ ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವದು. ಶುಭ ಸಂಖ್ಯೆ: 9

ಕಟಕ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 2

ಸಿಂಹ: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವುದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು. ಶುಭ ಸಂಖ್ಯೆ: 4

ಕನ್ಯಾ: ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಶುಭ ಸಂಖ್ಯೆ: 7

ತುಲಾ: ನಿಶ್ಚಿತ ಆರ್ಥಿಕ ಸ್ಥಿತಿ ಇರುವದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 9

ವೃಶ್ಚಿಕ: ವ್ಯಥಾ ಚಿಂತೆ, ತಪ್ಪು ಕಲ್ಪನೆ, ನಿಷ್ಟುರ ಮಾತುಗಳನ್ನು ಕೇಳುವ ಸಂಭವ, ಜನ್ಮಸ್ಥ ಶುಕ್ರ ಇರುವದರಿಂದ ಆರ್ಥಿಕ ಸುಭದ್ರತೆ ಇರುವುದು. ವಿದ್ಯಾರ್ಥಿಗಳಿಗೆ ಪರಿಶ್ರಮ ಅವಶ್ಯಕ. ಮನೆಯಲ್ಲಿ ಸಂತೋಷವಿರುವುದು. ಗೋಸೇವೆಯಿಂದ ಕಷ್ಟಪರಿಹಾರ. ಶುಭ ಸಂಖ್ಯೆ: 6

ಧನು: ಅಲ್ಪ ತ್ರಾಸದಾಯಕ. ಗಡಿಬಿಡಿಯ ವಾತಾವರಣ, ಆರೋಗ್ಯದಲ್ಲಿ ಏರುಪೇರು ಸಂಭವ. ಮಹತ್ವದ ಕೆಲಸಗಳನ್ನು ಮುಂದೂಡುವುದು ಒಳ್ಳೆಯದು. ಮಂಗಳಕಾರ್ಯ, ಹೆಸರು, ಕಡಲೆ ದಾನ ಮಾಡಿರಿ. ಶುಭ ಸಂಖ್ಯೆ: 3

ಮಕರ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾಶವಿಲ್ಲದಂತೆ ನಡೆದುಕೊಳ್ಳುವುದು ಒಳಿತು. ಶುಭ ಸಂಖ್ಯೆ: 8

ಕುಂಭ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ. ಶುಭ ಸಂಖ್ಯೆ: 2

ಮೀನ: ಆಗುವುದೆಲ್ಲ ಒಳಿತೆಂಬ ಭಾವನೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ. ಮಹಿಳೆಯರಿಗೆ ಮನೆಯಲ್ಲಿನ ಆಂತರಿಕ ವಿರಸ ನೀಗಿ ಸೌಹಾರ್ದತೆ. ನೂತನ ವಿವಾದ ಹುಟ್ಟುಹಾಕದ ಹಾಗೆ ತಾಳ್ಮೆಯಡಿ ವರ್ತನೆ. ಶುಭ ಸಂಖ್ಯೆ: 5

 

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937