Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ

| Updated By: ಆಯೇಷಾ ಬಾನು

Updated on: May 16, 2021 | 6:33 AM

Horoscope Today: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲಪಕ್ಷ, ಚೌತಿ ತಿಥಿ, ಭಾನುವಾರ, ಮೇ 16, 2021 ರಾಶಿ ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯವರಿಗೆ ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲಪಕ್ಷ, ಚೌತಿ ತಿಥಿ, ಭಾನುವಾರ, ಮೇ 16, 2021. ಆರ್ದ್ರೆ ನಕ್ಷತ್ರ, ರಾಹುಕಾಲ: ಇಂದು ಸಂಜೆ 5:02ರಿಂದ ಇಂದು ಸಂಜೆ 6:39 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.43. ಸೂರ್ಯಾಸ್ತ: ಸಂಜೆ 6.40.

ತಾ.16-05-2021 ರ ಭಾನುವಾರದ ರಾಶಿಭವಿಷ್ಯ

ಮೇಷ: ಗುರಿಸಾಧನೆಗೆ ಇದು ಸೂಕ್ತ ಸಮಯ. ಪ್ರಯತ್ನಿಸಿದ ಕಾರ್ಯಗಳು ಕೈಗೂಡುವವು. ವಿದ್ಯಾರ್ಥಿಗಳಿಗೆ ಉನ್ನತ ಪ್ರಶಸ್ತಿ ದೊರಕುವ ಸಾಧ್ಯತೆ ಇರುವದು. ಶುಭ ಸಂಖ್ಯೆ:  2

ವೃಷಭ: ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ:  6

ಮಿಥುನ: ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವದು. ಶಾಂತಿ,ನೆಮ್ಮದಿಯುಕ್ತ ಜೀವನ ಇರುವದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವದರಿಂದ ಗುರಿ ಮುಟ್ಟುವದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವದು. ಶುಭ ಸಂಖ್ಯೆ:  9

ಕರ್ಕ: ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯುವದು. ಕೋರ್ಟನಲ್ಲಿ ಇರುವ ನ್ಯಾಯ ಬಗೆಹರಿಯುವದು. ಆರ್ಥಿಕ ಸುಧಾರಣೆ ಕಂಡುಬರುವದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವದು. ಶುಭ ಸಂಖ್ಯೆ:  4

ಸಿಂಹ: ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಸಹೋದರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ.ಪರಸ್ಪರ ದೋಷಾರೋಪ ಬೇಡ.ಮಿತ್ರರ ಸಹಾಯ ದೊರೆಯುವದು. ಶುಭ ಸಂಖ್ಯೆ:  1

ಕನ್ಯಾ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ.ವ್ಯಾಪಾರವೃದ್ಧಿಯಾಗುವದು. ಆರ್ಥಿಕ ಸಂಕಷ್ಟ ದೂರಾಗುವದು. ಶುಭ ಸಂಖ್ಯೆ:  7

ತುಲಾ: ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ:  6

ವೃಶ್ಚಿಕ: ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ. ಶುಭ ಸಂಖ್ಯೆ:  6

ಧನು: ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವದು. ಶುಭ ಸಂಖ್ಯೆ:  4

ಮಕರ: ಹಿರಿಯರ ಮಾರ್ಗದರ್ಶನ ದೊರೆಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವದು. ಶುಭ ಸಂಖ್ಯೆ:  2

ಕುಂಭ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ:  9

ಮೀನ: ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ. ಶುಭ ಸಂಖ್ಯೆ:  3

 

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937