Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ನಿರೀಕ್ಷೆಗೆ ತಕ್ಕಂತೆ ಕೆಲಸ ಆಗದೆ ಮಾನಸಿಕ ಅಶಾಂತಿ ಕಂಡುಬರುವುದು

Horoscope ಮೇ 17, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ನಿರೀಕ್ಷೆಗೆ ತಕ್ಕಂತೆ ಕೆಲಸ ಆಗದೆ ಮಾನಸಿಕ ಅಶಾಂತಿ ಕಂಡುಬರುವುದು
ದಿನ ಭವಿಷ್ಯ
Follow us
ಆಯೇಷಾ ಬಾನು
|

Updated on:May 17, 2021 | 6:43 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲಪಕ್ಷ, ಪಂಚಮಿ ತಿಥಿ, ಸೋಮವಾರ, ಮೇ 17, 2021. ಪುನರ್ವಸು ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.20 ರಿಂದ ಇಂದು ಬೆಳಿಗ್ಗೆ 8.57 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.43. ಸೂರ್ಯಾಸ್ತ: ಸಂಜೆ 6.41.

ತಾ.17-05-2021 ರ ಸೋಮವಾರದ ರಾಶಿಭವಿಷ್ಯ

ಮೇಷ: ಕಾಯಕನಿಷ್ಠೆ ನಿಮಗೇ ಹೊರೆಯಾಗದಂತೆ ನೋಡಿಕೊಳ್ಳಿರಿ. ನಿರಂತರ ದುಡಿಮೆಯಿಂದ ಅನಾರೋಗ್ಯ ಅಥವಾ ಮಾನಸಿಕ ಕಿರಿಕಿರಿ ಆಗುವ ಸಂಭವವಿದೆ. ಹಣಕಾಸಿನಿನ ವ್ಯವಹಾರದಲ್ಲಿ ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 6

ವೃಷಭ: ನಿರೀಕ್ಷೆಗೆ ತಕ್ಕಂತೆ ಕೆಲಸ ಆಗದೇ ಮಾನಸಿಕ ಅಶಾಂತಿ ಕಂಡುಬರುವುದು. ವ್ಯವಹಾರಗಳಲ್ಲಿ ಹಾನಿಯಾಗುವ ಭಯ ಇರುವುದು. ಪರಿಣಿತರ ಅಥವಾ ಹಿರಿಯರ ಸಲಹೆಯಂತೆ ಮುಂದುವರೆಯಿರಿ. ವಿದ್ಯಾರ್ಥಿಗಳಿಗೆ ಒಳ್ಳೆಯ ಫಲವಿದೆ. ಶುಭ ಸಂಖ್ಯೆ: 1

ಮಿಥುನ: ಆಸ್ತಿ ವಿಷಯಕ್ಕೆ ಸಂಬಂಧಿಸಿಂತೆ ತೊಂದರೆಯಾಗುವ ಸಂಭವವಿದೆ. ಆದಾಯ ಉತ್ತಮವಾಗಿರುವುದು. ನೌಕರಿಯಲ್ಲಿ ಅಸಹಕಾರ ಎದುರಿಬೇಕಾಗುವದು. ಗ್ರಹಸೌಖ್ಯವಿದ್ದರೂ ಮಾನಸಿಕ ನೆಮ್ಮದಿ ಇರಲಾರದು. ಶುಭ ಸಂಖ್ಯೆ: 9

ಕಟಕ: ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 3

ಸಿಂಹ: ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ. ಸಾಧನೆಗೆ ಸೂಕ್ತ ಅವಕಾಶ ದೊರೆಯುವುದು. ಹಣಕಾಸಿನ ತೊಂದರೆಗಳು ಪರಿಹಾರವಾಗುವವು. ವ್ಯವಹಾರಗಳಲ್ಲಿ ಗೌಪ್ಯತೆ ಇರಲಿ. ಹಿತಶತ್ರುಗಳಿಂದ ತೊಂದರೆಯಾಗುವ ಸಧ್ಯತೆ ಇದೆ. ಶುಭ ಸಂಖ್ಯೆ: 5

ಕನ್ಯಾ: ನಿಶ್ಚಿತ ಕೆಲಸಕ್ಕೆ ಬೆಂಬಲ ಸಿಗುವುದರಿಂದ ಉತ್ತಮ ಫಲ ದೊರೆಯುವದು. ಸುಮ್ಮನೇ ಕೂಡದ ಜಾಯಮಾನ ಇರುವದರಿಂದ ಹೊಸ ಯೋಜನೆಯನ್ನು ರೂಪಿಸುವಿರಿ. ಹಿಂದಿನ ಬಾಕಿ ವಸೂಲಾತಿಗೆ ಶ್ರಮಿಸಬೇಕಾಗುವದು. ಶುಭ ಸಂಖ್ಯೆ: 8

ತುಲಾ: ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ. ಶುಭ ಸಂಖ್ಯೆ: 5

ವೃಶ್ಚಿಕ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 2

ಧನು: ವ್ಯಾಪಾರಾದಿ ಉದ್ಯಮಗಳಲ್ಲಿ ಪ್ರಗತಿಯಿದ್ದು ಧನಲಾಭ, ಐಶ್ವರ್ಯವೃದ್ಧಿಯಿದೆ. ಆದರೆ ವ್ಯವಹಾರಿಕ ಕಿರಿಕಿರಿ ಇರುವುದು. ಅನಿರೀಕ್ಷಿತ ಧನಲಾಭವೂ ಇದೆ. ಕೈಗೊಂಡ ಕಾರ್ಯಗಳಿಗೆ ವಿಘ್ನ ತೋರಿದರೂ ನೆರವೇರುತ್ತದೆ. ಶುಭ ಸಂಖ್ಯೆ: 7

ಮಕರ: ವ್ಯವಹಾರಿಕ ಏಳ್ಗೆ ಇರುವುದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ.ವಿವಿಧ ಸೌಭಾಗ್ಯಪ್ರಾಪ್ತಿ..ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್,ವಾಹನ,ಮಶಿನರಿಗಳಿಂದ ತೊಂದರೆ. ಶುಭ ಸಂಖ್ಯೆ: 9

ಕುಂಭ: ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವುದು. ಕುಟುಂಬದ ಜವಾಬ್ದಾರಿ ಹೆಚ್ಚುವುದು. ಮಕ್ಕಳ ವಿದ್ಯಾಬ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ. ಶುಭ ಸಂಖ್ಯೆ: 3

ಮೀನ: ಅಪೇಕ್ಷಿಸಿದ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಳ್ಳುವವು ಆಸ್ತಿ ವಿವಾದ ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ, ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು.ಸಭಾಸಮಾಜ ಕೀರ್ತಿ ಲಭಿಸುವುದು. ಶುಭ ಸಂಖ್ಯೆ: 4

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:32 am, Mon, 17 May 21

ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ