ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲಪಕ್ಷ, ಷಷ್ಠಿ ತಿಥಿ, ಮಂಗಳವಾರ, ಮೇ 18, 2021. ಪುಷ್ಯ ನಕ್ಷತ್ರ, ರಾಹುಕಾಲ: ಇಂದು ಸಂಜೆ 3.26 ರಿಂದ ಇಂದು ಸಂಜೆ 5.03 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.43. ಸೂರ್ಯಾಸ್ತ: ಸಂಜೆ 6.41.
ತಾ.18-05-2021 ರ ಮಂಗಳವಾರದ ರಾಶಿಭವಿಷ್ಯ
ಮೇಷ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 6
ವೃಷಭ: ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವುದು. ಶಾಂತಿ, ನೆಮ್ಮದಿಯುಕ್ತ ಜೀವನ ಇರುವುದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವುದರಿಂದ ಗುರಿ ಮುಟ್ಟುವದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 1
ಮಿಥುನ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 2
ಕಟಕ: ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವವು. ಸಂಬಂಧಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 9
ಸಿಂಹ: ಕೃಷಿ ಮೂಲದ ಲಾಭ ದೊರೆಯುವುದು. ಸಹೋದ್ಯೋಗಿಗಳ ಸಹಾಯ ಅಪೃಕ್ಷಿಸದೇ ಸ್ವಂತಬಲದಿಂದ ಕೆಲಸ ನಿರ್ವಹಿಸಿರಿ. ಕೈಗೊಂಡ ಕಾರ್ಯಗಳು ಯಶಸ್ವಿಯಾಗುವವು. ನೌಕರರಿಗೆ ಕಿರಿಕಿರಿಯಾಗುವ ಸಂಭವವಿದೆ. ಶುಭ ಸಂಖ್ಯೆ: 5
ಕನ್ಯಾ: ಬದಲಾವಣೆಯನ್ನು ಸಹಜವಾಗಿ ಸ್ವೀಕರಿಸಿ. ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸುವಿರಿ. ಸಾಮಾಜಿಕ ಗೌರವಗಳು ಅರಸಿಕೊಂಡು ಬರಲಿವೆ. ಮಾಲೀಕತ್ವದ ಆಸ್ತಿ ಕೈತಪ್ಪದಂತೆ ಎಚ್ಚರಿಕೆ ವಹಿಸಿರಿ. ಧನದ ಅಪವ್ಯಯ ಆಗದಂತೆ ನೋಡಿರಿ. ಶುಭ ಸಂಖ್ಯೆ: 7
ತುಲಾ: ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ. ಶುಭ ಸಂಖ್ಯೆ: 3
ವೃಶ್ಚಿಕ: ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವುದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 8
ಧನು: ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಶುಭ ಸಂಖ್ಯೆ: 3
ಮಕರ: ವ್ಯಾಪಾರಾದಿ ಉದ್ಯಮಗಳಲ್ಲಿ ಪ್ರಗತಿಯಿದ್ದು ಧನಲಾಭ, ಐಶ್ವರ್ಯ ವೃದ್ಧಿಯಿದೆ. ಆದರೆ ವ್ಯವಹಾರಿಕ ಕಿರಿಕಿರಿ ಇರುವುದು. ಅನಿರೀಕ್ಷಿತ ಧನಲಾಭವೂ ಇದೆ. ಕೈಗೊಂಡ ಕಾರ್ಯಗಳಿಗೆ ವಿಘ್ನ ತೋರಿದರೂ ನೆರವೇರುತ್ತದೆ. ಶುಭ ಸಂಖ್ಯೆ: 6
ಕುಂಭ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವುದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 4
ಮೀನ: ನಿಮ್ಮ ಶತ್ರುಗಳು ತಮ್ಮ ಕೃತ್ಯಗಳಿಂದ ತಾವಾಗಿಯೇ ಮಣಿಯುವರು. ಶತ್ರುದೋಷ ಪರಿಹಾರವಾಗುವುದು.ಚೋರ ಭಯ, ಅಗ್ನಿ ಭಯ ಮುಂತಾದ ಭಯ ನಿವಾರಣೆಯಾಗುವುದು. ಪುತ್ರಸೌಖ್ಯ, ಮನೆಯಲ್ಲಿ ಸಂತೋಷವಿರುವುದು. ಶುಭ ಸಂಖ್ಯೆ: 2
ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937