Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ಸಹನೆ ಇಲ್ಲದ ಆತುರದ ನಡೆಯಿಂದ ಹಾನಿ ಸಂಭವ, ಎಚ್ಚರಿಕೆ ವಹಿಸಿರಿ
Horoscope ಮೇ 19, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲಪಕ್ಷ, ಸಪ್ತಮಿ ತಿಥಿ, ಬುಧವಾರ, ಮೇ 19, 2021. ಆಶ್ಲೇಷ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.12 ರಿಂದ ಇಂದು ಮಧ್ಯಾಹ್ನ 1.49 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.43. ಸೂರ್ಯಾಸ್ತ: ಸಂಜೆ 6.42.
ತಾ.19-05-2021 ರ ಬುಧವಾರದ ರಾಶಿಭವಿಷ್ಯ
ಮೇಷ: ಮನೆಯಲ್ಲಿ ಅಸಮಾಧಾನ ಇರುವುದು. ಕೂಡಿಟ್ಟ ಹಣ ಹಾನಿಯಾಗುವ ಸಂಭವವಿದೆ. ಅಣ್ಣತಮ್ಮಂದಿರಲ್ಲಿ ಸಹಕಾರ ಅತ್ಯಂತ ಅವಶ್ಯಕ. ತೋಟಗಾರಿಕೆ ಫಲಪ್ರದವಾಗಲಿದೆ. ವ್ಯಾಪಾರ ವೃದ್ಧಿಯಾಗುವುದು. ಶುಭ ಸಂಖ್ಯೆ: 3
ವೃಷಭ: ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು. ಕೋರ್ಟ್ನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು. ಶುಭ ಸಂಖ್ಯೆ: 7
ಮಿಥುನ: ವಿನಯಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವದು. ಶುಭ ಸಂಖ್ಯೆ: 9
ಕಟಕ: ಸಹನೆ ಇಲ್ಲದ ಆತುರದ ನಡೆಯಿಂದ ಹಾನಿ ಸಂಭವ ಎಚ್ಚರಿಕೆ ವಹಿಸಿರಿ. ಅನೀರೀಕ್ಷಿತವಾಗಿ ಬರುವ ವಿಘ್ನಗಳು ತಾವಾಗಿಯೇ ಪರಿಹಾರ ಕಾಣುವವು. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಶುಭ ಸಂಖ್ಯೆ: 6
ಸಿಂಹ: ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ. ಶುಭ ಸಂಖ್ಯೆ: 1
ಕನ್ಯಾ: ಬದಲಾವಣೆಯನ್ನು ಸಹಜವಾಗಿ ಸ್ವೀಕರಿಸಿ. ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸುವಿರಿ. ಸಾಮಜಿಕ ಗೌರವಗಳು ಅರಸಿಕೊಂಡು ಬರಲಿವೆ. ಮಾಲೀಕತ್ವದ ಆಸ್ತಿ ಕೈತಪ್ಪದಂತೆ ಎಚ್ಚರಿಕೆ ವಹಿಸಿರಿ. ಧನದ ಅಪವ್ಯಯ ಆಗದಂತೆ ನೋಡಿರಿ. ಶುಭ ಸಂಖ್ಯೆ: 3
ತುಲಾ: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವದು. ಬಂಧುಮಿತ್ರರ ಸಹಕಾರ ದೊರೆಯುವದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವದು. ಮನೆಯಲ್ಲಿ ಸಂತಸ ಮೂಡುವದು. ಶುಭಕಾರ್ಯಗಳು ಜರುಗುವವು. ಶುಭ ಸಂಖ್ಯೆ: 8
ವೃಶ್ಚಿಕ: ಹೊಸ ಆಲೋಚನೆಯೊಂದು ಕಾರ್ಯರೂಪಕ್ಕೆ ಬರುವದು. ಸಹವರ್ತಿಗಳ ಅಸಹಕಾರ ಇದ್ದರೂ ತೊಂದರೆ ಆಗಲಾರದು. ಅನಪೇಕ್ಷಿತ ಸ್ಥಾನ ಬದಲಾವಣೆ ಆಗುವ ಸಾಧ್ಯತೆ ಇದೆ. ಸರಿಯಾದ ಧ್ಯೇಯದಿಂದ ಸಮಾಧಾನ ಇರುವದು. ಶುಭ ಸಂಖ್ಯೆ: 2
ಧನು: ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವದು. ಸಂಕಷ್ಟಗಳ ಪರಿಹಾರಕ್ಕಾಗಿ ಅಲೆದಾಡಬೇಕಾದ ಸಂಭವವಿದೆ. ಶುಭ ಸಂಖ್ಯೆ: 5
ಮಕರ: ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವದು. ಮನೋಚಿಂತಿತ ಕಾರ್ಯ ಕೈಗೂಡುವದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ. ಶುಭ ಸಂಖ್ಯೆ: 4
ಕುಂಭ: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 2
ಮೀನ: ಆರಂಭದಲ್ಲಿ ಹರ್ಷ, ಉತ್ಸಾಹ ಇರುವದು ಕೊನೆಗೆ ಮನೋವ್ಯಥೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವದು. ಗ್ರಹೋಪಯೋಗಿ ವಸ್ತುಗಳ ಖರೀದಿ, ಮನೆ ರಿಪೇರಿ ಮೊದಲಾದ ಕೆಲಸಗಳಾಗುವವು. ಶ್ರೀಲಕ್ಷ್ಮೀಸ್ತೋತ್ರ ಪಠಿಸಿರಿ. ಶುಭ ಸಂಖ್ಯೆ: 6
ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937