Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ

| Updated By: Skanda

Updated on: May 21, 2021 | 6:33 AM

Horoscope ಮೇ 21, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯವರಿಗೆ ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲಪಕ್ಷ, ನವಮಿ ತಿಥಿ, ಶುಕ್ರವಾರ, ಮೇ 21, 2021. ಪುಬ್ಬೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.34 ರಿಂದ ಇಂದು ಬೆಳಿಗ್ಗೆ 12.11 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.42. ಸೂರ್ಯಾಸ್ತ: ಸಂಜೆ 6.42.

ತಾ.21-05-2021 ರ ಶುಕ್ರವಾರದ ರಾಶಿಭವಿಷ್ಯ

ಮೇಷ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತೆ ಮೀರಿ ದುಡಿಯುವ ಕಾರ್ಯಭಾರವಿರುವುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 5

ವೃಷಭ: ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಉದ್ಯೋಗದಲ್ಲಿ ಅಭಿವೃದ್ಧಿ ಇರುವುದು. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಲೆಕ್ಕಾಚಾರ ತಪ್ಪದಂತೆ ಎಚ್ಚರವಹಿಸಿರಿ. ಮನೆಯಲ್ಲಿ ಮಂಗಳಕಾರ್ಯ ಜರುಗುವುದು. ಶುಭ ಸಂಖ್ಯೆ: 1

ಮಿಥುನ: ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ. ಹಳೆಯ ಸಮಸ್ಯೆಗಳು ಮತ್ತೆ ಎದುರಾಗುವ ಸಂಭವವಿದೆ. ಚಂಚಲತೆ ಬೇಡ, ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ. ಆರ್ಥಿಕ ಲಾಭವಿದೆ ಆದರೆ ವಿದ್ಯೆಯಲ್ಲಿ ಹಿನ್ನಡೆ ಕಂಡುಬರುವುದು. ಶುಭ ಸಂಖ್ಯೆ: 7

ಕಟಕ: ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಅನಿವಾರ್ಯ ಕೆಲಸಗಳಗೆ ಅಲೆದಾಟ ಕಂಡುಬರುವುದು. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 9

ಸಿಂಹ: ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವವು. ಶುಭ ಸಂಖ್ಯೆ: 3

ಕನ್ಯಾ: ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಉನ್ನತ ಶಿಕ್ಷಣದ ಕನಸು ಈಡೇರುವುದು. ಶುಭ ಸಂಖ್ಯೆ: 6

ತುಲಾ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 8

ವೃಶ್ಚಿಕ: ದೈಹಿಕ ಸಮಸ್ಯೆಗಳು ಉಲ್ಬಣವಾಗಿ ಕೆಲಸಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ಮನೆಯಲ್ಲಿ ಕಾರ್ಯ ವಿರೋಧ ಇರುವುದು. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಮಾತಿಗಿಂತ ಕೃತಿಗೆ ಮಹತ್ವ ಕೊಡಿ. ಶುಭ ಸಂಖ್ಯೆ: 2

ಧನು: ತಪ್ಪುಗಳನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 4

ಮಕರ: ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 5

ಕುಂಭ: ಅಲ್ಪ ತ್ರಾಸದಾಯಕ. ಗಡಿಬಿಡಿಯ ವಾತಾವರಣ, ಆರೋಗ್ಯದಲ್ಲಿ ಏರುಪೇರು ಸಂಭವ. ಮಹತ್ವದ ಕೆಲಸಗಳನ್ನು ಮುಂದೂಡುವುದು ಒಳ್ಳೆಯದು. ಮಂಗಳಕಾರ್ಯ, ಹೆಸರು, ಕಡಲೆ ದಾನ ಮಾಡಿರಿ. ಶುಭ ಸಂಖ್ಯೆ: 2

ಮೀನ: ದೂರ ಪ್ರಯಾಣದ ಅವಶ್ಯಕತೆ ಕಂಡುಬರುವುದು. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ಅನೇಕ ರೀತಿಯ ಸೌಭಾಗ್ಯಗಳು ದೊರೆಯುವವು. ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ಮಶಿನರಿಗಳಿಂದ ತೊಂದರೆ ಸಾಧ್ಯತೆ. ಶುಭ ಸಂಖ್ಯೆ: 6

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937