ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲಪಕ್ಷ, ಏಕಾದಶಿ ತಿಥಿ, ಭಾನುವಾರ, ಮೇ 23, 2021. ಹಸ್ತ ನಕ್ಷತ್ರ, ರಾಹುಕಾಲ: ಇಂದು ಸಂಜೆ 5:5 ರಿಂದ ಇಂದು ಸಂಜೆ 6:42 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.42. ಸೂರ್ಯಾಸ್ತ: ಸಂಜೆ 6.43.
ತಾ.23-05-2021 ರ ಭಾನುವಾರದ ರಾಶಿಭವಿಷ್ಯ
ಮೇಷ: ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ.ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ. ಶುಭ ಸಂಖ್ಯೆ: 1
ವೃಷಭ: ಕುಟುಂಬದಲ್ಲಿ ಭಿನ್ನಾಭಿಪ್ರಾಯ ಇರುವದು. ವೈವಾಹಿಕ ಚಿಂತೆ ಇರುವದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ.ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭ ಸಂಖ್ಯೆ:3
ಮಿಥುನ: ಕಾಯಕನಿಷ್ಠೆ ನಿಮಗೇ ಹೊರೆಯಾಗದಂತೆ ನೋಡಿಕೊಳ್ಳಿರಿ. ನಿರಂತರ ದುಡಿಮೆಯಿಂದ ಅನಾರೋಗ್ಯ ಅಥವಾ ಮಾನಸಿಕ ಕಿರಿಕಿರಿ ಆಗುವ ಸಂಭವವಿದೆ. ಹಣಕಾಸಿನಿನ ವ್ಯವಹಾರದಲ್ಲಿ ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 6
ಕರ್ಕ: ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವದು. ಶುಭ ಸಂಖ್ಯೆ: 4
ಸಿಂಹ: ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವದು.ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಗಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ. ಶತ್ರುಬಾಧೆ ಕಂಡುಬರುವದು. ಆರೋಗ್ಯದ ಮೇಲೆ ನಿಗಾ ಇರಲಿ. ಶುಭ ಸಂಖ್ಯೆ: 5
ಕನ್ಯಾ: ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಅನಿವಾರ್ಯ ಕೆಲಸಗಳಗೆ ಅಲೆದಾಟ ಕಂಡುಬರುವದು. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವದು. ಶುಭ ಸಂಖ್ಯೆ: 8
ತುಲಾ: ಕುಟುಂಬದಲ್ಲಿ ಮನಸ್ತಾಪ ಕಂಡುಬರುವದು. ಗೌಪ್ಯ ವ್ಯವಹಾರಗಳನ್ನು ಸರಿದೂಗಿಸಲು ಸಾಧ್ಯವಾಗದೇ ಪರಿತಪಿಸುವಿರಿ. ಆಸಕ್ತಿ ಆಪತ್ತು ತರುವ ಸಂಭವವಿದೆ. ಮಹತ್ವದ ನಿರ್ಧಾರಗಳಿಗೆ ಇದು ಸೂಕ್ತಕಾಲವಲ್ಲ. ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 8
ವೃಶ್ಚಿಕ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 2
ಧನು: ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ:1
ಮಕರ: ವ್ಯವಹಾರಿಕ ಏಳ್ಗೆ ಇರುವದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ.ವಿವಿಧ ಸೌಭಾಗ್ಯಪ್ರಾಪ್ತಿ..ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್,ವಾಹನ,ಮಶಿನರಿಗಳಿಂದ ತೊಂದರೆ. ಶುಭ ಸಂಖ್ಯೆ: 3
ಕುಂಭ: ನಿಧಾನವಾಗಿ ಕಾರ್ಯಸಿದ್ಧಿಯಾಗುವದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶಾಂತಚಿತ್ತರಾಗಿ ವ್ಯವಹರಿಸಿರಿ. ಶುಭ ಸಂಖ್ಯೆ: 4
ಮೀನ: ನಿಧಾನವಾಗಿ ಕಾರ್ಯಸಿದ್ಧಿಯಾಗುವದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶುಭ ಸಂಖ್ಯೆ: 9