Horoscope Today- ದಿನ ಭವಿಷ್ಯ; ಮೇಷದಿಂದ ಮೀನ ರಾಶಿಯವರೆಗಿನ ಇಂದಿನ ಭವಿಷ್ಯ
Horoscope ಮೇ 24, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲಪಕ್ಷ, ತ್ರಯೋದಶಿ ತಿಥಿ, ಸೋಮವಾರ, ಮೇ 24, 2021. ಚಿತ್ತೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.18 ರಿಂದ ಇಂದು ಬೆಳಿಗ್ಗೆ 8.55 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.41. ಸೂರ್ಯಾಸ್ತ: ಸಂಜೆ 6.43.
ತಾ.24-05-2021 ರ ಸೋಮವಾರದ ರಾಶಿಭವಿಷ್ಯ
ಮೇಷ: ಅನಿಸಿಕೆಗಿಂತ ವಾಸ್ತವ ಬೇರೆ ಇರುವುದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವುದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭ ಸಂಖ್ಯೆ: 5
ವೃಷಭ: ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಶುಭ ಸಂಖ್ಯೆ: 3
ಮಿಥುನ: ಆರೋಗ್ಯಪೂರ್ಣತೆ, ಪ್ರಸನ್ನತೆ ಇರುವುದು. ಎಲ್ಲ ಕಾರ್ಯಗಳೂ ತಮ್ಮ ಮನಸ್ಸಿನಂತೆ ನಡೆಯುವವು. ಧನಲಾಭ, ಧಾರ್ಮಿಕ ಕಾರ್ಯ, ದೇವತಾ ಕ್ಷೇತ್ರ ದರ್ಶನ ಯೋಗವಿರುವುದು. ವ್ಯಾಪಾರ ಸಾಧಾರಣ. ಶುಭ ಸಂಖ್ಯೆ: 9
ಕಟಕ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 2
ಸಿಂಹ: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂ ಅಧಿಕ ಖರ್ಚು ಇರುವುದು. ಶುಭ ಸಂಖ್ಯೆ: 7
ಕನ್ಯಾ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ: 8
ತುಲಾ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 4
ವೃಶ್ಚಿಕ: ಆದಾಯ ಹೆಚ್ಚುವದು. ವ್ಯವಹಾರಿಕ ಏಳ್ಗೆ ಇರುವದು. ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವದು. ಶಾಂತಚಿತ್ತರಾಗಿ ವ್ಯವಹರಿಸಿರಿ. ಕೆಲಸದಲ್ಲಿ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಶುಭ ಸಂಖ್ಯೆ: 1
ಧನು: ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿಯು ಉತ್ತಮ ಫಲಕೊಡುವದು. ಹಳೆಯ ಬಾಕಿ ವಸೂಲಾಗುವದು. ವ್ಯಾಜ್ಯಗಳು ಅಂತ್ಯಕಾಣುವವು. ಗ್ರಹ ಸೌಖ್ಯವಿರುವದು. ಶುಭ ಸಂಖ್ಯೆ: 3
ಮಕರ: ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವದು ಆದರೂ ಕೀರ್ತಿದಾಯಕ ಫಲವಿದೆ. ಶುಭ ಸಂಖ್ಯೆ: 5
ಕುಂಭ: ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವದು. ಸಂಕಷ್ಟಗಳ ಪರಿಹಾರಕ್ಕಾಗಿ ಅಲೆದಾಡಬೇಕಾದ ಸಂಭವವಿದೆ. ಶುಭ ಸಂಖ್ಯೆ: 6
ಮೀನ: ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವದು. ಮಾನಸಿಕ ಉತ್ಸಾಹ ಕಂಡುಬರುವದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವದು. ಕಾರಣಾಂತರ ಅಧಿಕ ಖರ್ಚುಬರಬಹುದು. ಶುಭ ಸಂಖ್ಯೆ: 9
ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937