Horoscope Today- ದಿನ ಭವಿಷ್ಯ; ಈ ರಾಶಿಯವರು ದೋಷ ಪರಿಹಾರಕ್ಕೆ ಜಲದಾನ ಮಾಡಬೇಕು

|

Updated on: May 25, 2021 | 6:33 AM

Horoscope ಮೇ 25, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರು ದೋಷ ಪರಿಹಾರಕ್ಕೆ ಜಲದಾನ ಮಾಡಬೇಕು
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲಪಕ್ಷ, ಚತುರ್ದಶಿ ತಿಥಿ, ಮಂಗಳವಾರ, ಮೇ 25, 2021. ಸ್ವಾತಿ ನಕ್ಷತ್ರ, ರಾಹುಕಾಲ: ಇಂದು ಸಂಜೆ 3.28 ರಿಂದ ಇಂದು ಸಂಜೆ 5.05 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.41. ಸೂರ್ಯಾಸ್ತ: ಸಂಜೆ 6.44.

ತಾ.25-05-2021 ರ ಮಂಗಳವಾರದ ರಾಶಿಭವಿಷ್ಯ

ಮೇಷ: ಮಾತಿನಂತೆ ನಡೆದುಕೊಳ್ಳುವ ಪ್ರಯತ್ನ ಮಾಡುವಿರಿ. ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಕೆಲಸ ನಿರ್ವಹಿಲು ಆಗದಂತಹ ಸ್ಥಿತಿ ಬರಬಹುದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 6

ವೃಷಭ: ಹಳೆಯ ಸಾಲ ಮರುಪಾವತಿಯಾಗುದು. ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವವಿದೆ. ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಎದುರಾಡುವ ಸಂಭವವಿದೆ. ಶುಭ ಸಂಖ್ಯೆ: 2

ಮಿಥುನ: ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರುವದು. ಅಹಂಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗವಿದೆ ಎಚ್ಚರಿಕೆ ವಹಿಸಿರಿ. ನಮೃತೆಗೆ ಯೋಗ್ಯ ಸಮ್ಮಾನ ದೊರೆಯುವುದು. ಶುಭ ಸಂಖ್ಯೆ: 8

ಕಟಕ: ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿಯು ಉತ್ತಮ ಫಲಕೊಡುವದು. ಹಳೆಯ ಬಾಕಿ ವಸೂಲಾಗುವದು. ವ್ಯಾಜ್ಯಗಳು ಅಂತ್ಯಕಾಣುವವು. ಗ್ರಹ ಸೌಖ್ಯವಿರುವುದು. ಶುಭ ಸಂಖ್ಯೆ: 9

ಸಿಂಹ: ಎಲ್ಲವನ್ನು ಹಗುರವಾಗಿ ಕಾಣುವದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 1

ಕನ್ಯಾ: ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟಸಾಲ ಮರುಪಾವತಿಯಾಗುವದು. ಶುಭ ಸಂಖ್ಯೆ: 4

ತುಲಾ: ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವದು. ಶುಭ ಸಂಖ್ಯೆ: 5

ವೃಶ್ಚಿಕ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಸಂಗಡಿಗರು ಸಹಕಾರ ತೋರುವದರಿಂದ ನಿರಾತಂಕ ಜೀವನ ಇರುವದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಆರ್ಥಿಕ ಸಂಕಷ್ಟ ದೂರಾಗುವದು. ಶುಭ ಸಂಖ್ಯೆ: 7

ಧನು: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ: 3

ಮಕರ: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವದು. ಶುಭ ಸಂಖ್ಯೆ: 6

ಕುಂಭ: ಒಳ್ಳೆಯ ಮಾತುಗಳಂದ ಸಂಬಂಧ ಸುಧಾರಿಸುವದು. ಸ್ನೇಹಿತರಲ್ಲಿಯ ಮನಸ್ತಾಪ ದೂರಾಗುವದು. ಶಕ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ. ಶುಭ ಸಂಖ್ಯೆ: 9

ಮೀನ: ದಿಟ್ಟತನ, ಮನೋಸ್ಥೈರ್ಯ, ನೇರ,ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವದು. ಶುಭ ಸಂಖ್ಯೆ: 1

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937