ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲಪಕ್ಷ, ಹುಣ್ಣಿಮೆ ತಿಥಿ, ಬುಧವಾರ, ಮೇ 26, 2021. ಅನೂರಾಧ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.12 ರಿಂದ ಇಂದು ಮಧ್ಯಾಹ್ನ 1.49 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.41. ಸೂರ್ಯಾಸ್ತ: ಸಂಜೆ 6.44.
ತಾ.26-05-2021 ರ ಬುಧವಾರದ ರಾಶಿಭವಿಷ್ಯ
ಮೇಷ: ವ್ಯಾಪಾರದಲ್ಲಿ ಅದೃಷ್ಟಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವುದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಶುಭ ಸಂಖ್ಯೆ: 6
ವೃಷಭ: ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ. ವೈವಾಹಿಕ ಚಿಂತೆ ಇರುವುದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ದರ್ಶನ ಯೋಗವಿದೆ. ಶುಭ ಸಂಖ್ಯೆ: 2
ಮಿಥುನ: ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವುದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ. ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು. ಶುಭ ಸಂಖ್ಯೆ: 8
ಕಟಕ: ಹಳೆಯ ಸಾಲ ಮರುಪಾವತಿಯಾಗುವುದು. ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವವಿದೆ. ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಎದುರಾಡುವ ಸಂಭವವಿದೆ. ಶುಭ ಸಂಖ್ಯೆ: 1
ಸಿಂಹ: ಕೆಲಸಗಳು ನಿಧಾನಗತಿಯಲ್ಲಿ ಸಾಗುವವು ಸೂಕ್ಷ್ಮತೆಯಿಂದ ವ್ಯವಹರಿಸಿರಿ. ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ಮನೋಚಿಂತಿತ ಕಾರ್ಯ ಕೈಗೂಡುವದು. ಹಳೆಯ ಸಾಲ ತೀರುವುದು. ಶುಭ ಸಂಖ್ಯೆ: 7
ಕನ್ಯಾ: ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಸಹೋದರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ.ಬಪರಸ್ಪರ ದೋಷಾರೋಪ ಬೇಡ. ಮಿತ್ರರ ಸಹಾಯ ದೊರೆಯುವುದು. ಶುಭ ಸಂಖ್ಯೆ: 4
ತುಲಾ: ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು. ಶುಭ ಸಂಖ್ಯೆ: 5
ವೃಶ್ಚಿಕ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ.ವ್ಯಾಪಾರವೃದ್ಧಿಯಾಗುವದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 5
ಧನು: ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ.ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಶುಭ ಸಂಖ್ಯೆ: 3
ಮಕರ: ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಅಗೌರವ ಆಗುವ ಸಂಭವ ಇರುವದರಿಂದ ಸೂಕ್ಷ್ಮವಾಗಿರುವದು ಉತ್ತಮ. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು. ಶುಭ ಸಂಖ್ಯೆ: 9
ಕುಂಭ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 8
ಮೀನ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 3