Horoscope Today- ದಿನ ಭವಿಷ್ಯ; ಈ ರಾಶಿಯ ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು

|

Updated on: May 27, 2021 | 6:30 AM

Horoscope ಮೇ 27, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯ ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣಪಕ್ಷ, ಪಾಡ್ಯ ತಿಥಿ, ಗುರುವಾರ, ಮೇ 27, 2021. ಜ್ಯೇಷ್ಠ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.50 ರಿಂದ ಇಂದು ಸಂಜೆ 3.27 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.41. ಸೂರ್ಯಾಸ್ತ: ಸಂಜೆ 6.44.

ತಾ.27-05-2021 ರ ಗುರುವಾರದ ರಾಶಿಭವಿಷ್ಯ

ಮೇಷ: ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವದು. ಶಾಂತಿ,ನೆಮ್ಮದಿಯುಕ್ತ ಜೀವನ ಇರುವದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವದರಿಂದ ಗುರಿ ಮುಟ್ಟುವದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವದು. ಶುಭ ಸಂಖ್ಯೆ: 1

ವೃಷಭ: ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು. ಶುಭ ಸಂಖ್ಯೆ: 7

ಮಿಥುನ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು. ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ. ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು. ಶುಭ ಸಂಖ್ಯೆ: 4

ಕಟಕ: ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಅನವಶ್ಯಕ ಭಯ ಅಗತ್ಯವಿಲ್ಲ, ನಿಮ್ಮ ಸೇವೆ ಫಲ ನೀಡುವುದು. ಸಂಕಷ್ಟದ ಮಧ್ಯೆಯೂ ಸಂತೋಷದ ದಿನಗಳಿವೆ. ಆಗಂತುಕರೊಂದಿಗೆ ಜಾಗೃತೆ ಅಗತ್ಯ. ಶುಭ ಸಂಖ್ಯೆ: 9

ಸಿಂಹ: ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ. ಹಳೆಯ ಸಮಸ್ಯೆಗಳು ಮತ್ತೆ ಎದುರಾಗುವ ಸಂಭವವಿದೆ. ಚಂಚಲತೆ ಬೇಡ, ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ. ಆರ್ಥಿಕ ಲಾಭವಿದೆ ಆದರೆ ವಿದ್ಯೆಯಲ್ಲಿ ಹಿನ್ನಡೆ ಕಂಡುಬರುವುದು. ಶುಭ ಸಂಖ್ಯೆ: 3

ಕನ್ಯಾ: ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ.ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಶುಭ ಸಂಖ್ಯೆ: 6

ತುಲಾ: ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವುದು ಅಮಾಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವುದು. ಕೈಗೊಂಡ ಕಾರ್ಯ ಯಶ ಕಾಣುವುದು. ಶುಭ ಸಂಖ್ಯೆ: 8

ವೃಶ್ಚಿಕ: ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಶುಭ ಸಂಖ್ಯೆ: 3

ಧನು: ವ್ಯಾಪಾರಾದಿ ಉದ್ಯಮಗಳಲ್ಲಿ ಪ್ರಗತಿಯಿದ್ದು ಧನಲಾಭ, ಐಶ್ವರ್ಯವೃದ್ಧಿಯಿದೆ. ಆದರೆ ವ್ಯವಹಾರಿಕ ಕಿರಿಕಿರಿ ಇರುವುದು. ಅನಿರೀಕ್ಷಿತ ಧನಲಾಭವೂ ಇದೆ. ಕೈಗೊಂಡ ಕಾರ್ಯಗಳಿಗೆ ವಿಘ್ನ ತೋರಿದರೂ ನೆರವೇರುತ್ತದೆ. ಶುಭ ಸಂಖ್ಯೆ: 4

ಮಕರ: ನಿಧಾನವಾಗಿ ಕಾರ್ಯಸಿದ್ಧಿಯಾಗುವದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶುಭ ಸಂಖ್ಯೆ: 5

ಕುಂಭ: ನಿಮ್ಮ ಶತ್ರುಗಳು ತಮ್ಮ ಕೃತ್ಯಗಳಿಂದ ತಾವಾಗಿಯೇ ಮಣಿಯುವರು. ಶತ್ರುದೋಷ ಪರಿಹಾರವಾಗುವುದು.ಚೋರ ಭಯ, ಅಗ್ನಿ ಭಯ ಮುಂತಾದ ಭಯ ನಿವಾರಣೆಯಾಗುವುದು. ಪುತ್ರಸೌಖ್ಯ, ಮನೆಯಲ್ಲಿ ಸಂತೋಷವಿರುವುದು. ಶುಭ ಸಂಖ್ಯೆ: 7

ಮೀನ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು. ಶುಭ ಸಂಖ್ಯೆ: 2

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937