Horoscope Today- ದಿನ ಭವಿಷ್ಯ; ಶುಭ ಶುಕ್ರವಾರದ ಭವಿಷ್ಯ.. ಯಾರಿಗೆ ಶುಭ, ಯಾರಿಗೆ ಅಶುಭ
Horoscope ಮೇ 28, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣಪಕ್ಷ, ಬಿದಿಗೆ ತಿಥಿ, ಶುಕ್ರವಾರ, ಮೇ 28, 2021. ಮೂಲ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.35 ರಿಂದ ಇಂದು ಬೆಳಿಗ್ಗೆ 12.13 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.41. ಸೂರ್ಯಾಸ್ತ: ಸಂಜೆ 6.45.
ತಾ.28-05-2021 ರ ಶುಕ್ರವಾರದ ರಾಶಿಭವಿಷ್ಯ.
ಮೇಷ: ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ. ವೈವಾಹಿಕ ಚಿಂತೆ ಇರುವದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ದರ್ಶನ ಯೋಗವಿದೆ. ಶುಭ ಸಂಖ್ಯೆ: 4
ವೃಷಭ: ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಅನವಶ್ಯಕ ಭಯ ಅಗತ್ಯವಿಲ್ಲ, ನಿಮ್ಮ ಸೇವೆ ಫಲ ನೀಡುವುದು. ಸಂಕಷ್ಟದ ಮಧ್ಯೆಯೂ ಸಂತೋಷದ ದಿನಗಳಿವೆ. ಆಗಂತುಕರೊಂದಿಗೆ ಜಾಗೃತೆ ಅಗತ್ಯ. ಶುಭ ಸಂಖ್ಯೆ: 1
ಮಿಥುನ: ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 9
ಕಟಕ: ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಅನಿವಾರ್ಯ ಕೆಲಸಗಳಗೆ ಅಲೆದಾಟ ಕಂಡುಬರುವುದು. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 6
ಸಿಂಹ: ಅನಿಸಿಕೆಗಿಂತ ವಾಸ್ತವ ಬೇರೆ ಇರುವುದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವುದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭ ಸಂಖ್ಯೆ: 7
ಕನ್ಯಾ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 8
ತುಲಾ: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವುದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು. ಶುಭ ಸಂಖ್ಯೆ: 3
ವೃಶ್ಚಿಕ: ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವುದು. ಶುಭ ಸಂಖ್ಯೆ: 2
ಧನು: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವದು. ಶುಭ ಸಂಖ್ಯೆ: 5
ಮಕರ: ದೂರ ಪ್ರಯಾಣದ ಅವಶ್ಯಕತೆ ಕಂಡುಬರುವುದು. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ಅನೇಕ ರೀತಿಯ ಸೌಭಾಗ್ಯಗಳು ದೊರೆಯುವವು. ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ಮಶಿನರಿಗಳಿಂದ ತೊಂದರೆ ಸಾಧ್ಯತೆ. ಶುಭ ಸಂಖ್ಯೆ: 9
ಕುಂಭ: ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವುದು. ಗುರುಬಲ ವೃದ್ಧಿಸುವದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ಶುಭ ಸಂಖ್ಯೆ: 4
ಮೀನ: ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ. ಶುಭ ಸಂಖ್ಯೆ: 5