Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು

| Updated By: Skanda

Updated on: May 29, 2021 | 6:30 AM

Horoscope ಮೇ 29, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣಪಕ್ಷ, ತದಿಗೆ ತಿಥಿ, ಶನಿವಾರ, ಮೇ 29, 2021. ಪೂರ್ವಾಷಾಢ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 8.56 ರಿಂದ ಇಂದು ಬೆಳಿಗ್ಗೆ 10.34 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.41. ಸೂರ್ಯಾಸ್ತ: ಸಂಜೆ 6.45.

ತಾ.29-05-2021 ರ ಶನಿವಾರದ ರಾಶಿಭವಿಷ್ಯ

ಮೇಷ: ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವುದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ. ದೂರಪ್ರಯಾಣ ಯೋಗವಿದೆ. ಶುಭ ಸಂಖ್ಯೆ: 9

ವೃಷಭ: ಅಪಮಾನ, ಅಪವಾದದಂತಹ ಸಮಸ್ಯೆಗೆ ಸಿಲುಕದಂತೆ ಜಾಗರೂಕರಾಗಿರಿ. ಈ ಸಮಯದಲ್ಲಿ ಮಾತನಾಡುವ ಬದಲು ಮಾತು ಕೇಳುವುದು ಉತ್ತಮ. ಮಕ್ಕಳು ಶಾಲಾ ಕಾಲೇಜುಗಳಲ್ಲಿ ಸಾಧನೆ ತೋರುವುರು. ಶುಭ ಸಂಖ್ಯೆ: 2

ಮಿಥುನ: ಉದ್ಯೋಗ ಬದಲಿ ಮಾಡುವುದು ಸದ್ಯ ಬೇಡ. ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವುದು. ಶುಭ ಸಂಖ್ಯೆ: 7

ಕಟಕ: ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 3

ಸಿಂಹ: ವಿನಯಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವುದು. ಶುಭ ಸಂಖ್ಯೆ: 6

ಕನ್ಯಾ: ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟಸಾಲ ಮರುಪಾವತಿಯಾಗುವುದು. ಶುಭ ಸಂಖ್ಯೆ: 5

ತುಲಾ: ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿಯು ಉತ್ತಮ ಫಲಕೊಡುವುದು. ಹಳೆಯ ಬಾಕಿ ವಸೂಲಾಗುವುದು. ವ್ಯಾಜ್ಯಗಳು ಅಂತ್ಯಕಾಣುವವು. ಗ್ರಹ ಸೌಖ್ಯವಿರುವುದು. ಶುಭ ಸಂಖ್ಯೆ: 8

ವೃಶ್ಚಿಕ: ಪ್ರೀತಿವಿಶ್ವಾಸದ ಬಲದಿಂದ ಅಧಿಕಾರಿಗಳ ಗಮನ ಸೆಳೆಯುವಿರಿ. ಅತಿಯಾದ ಮೃದು ಧೋರಣೆ ದುರುಪಯೋಗವಾಗದಂತೆ ನೋಡಿಕೊಳ್ಳಿರಿ. ಮಂಗಳಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಇರುವುದು. ಶುಭ ಸಂಖ್ಯೆ: 4

ಧನು: ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ. ಶುಭ ಸಂಖ್ಯೆ: 3

ಮಕರ: ದೈಹಿಕ ಸಮಸ್ಯೆಗಳು ಉಲ್ಬಣವಾಗಿ ಕೆಲಸಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ಮನೆಯಲ್ಲಿ ಕಾರ್ಯ ವಿರೋಧ ಇರುವುದು. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಮಾತಿಗಿಂತ ಕೃತಿಗೆ ಮಹತ್ವ ಕೊಡಿ. ಶುಭ ಸಂಖ್ಯೆ: 3

ಕುಂಭ: ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 9

ಮೀನ: ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವುದು. ಕುಟುಂಬದ ಜವಾಬ್ದಾರಿ ಹೆಚ್ಚುವುದು. ಮಕ್ಕಳ ವಿದ್ಯಾಭ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವುದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ. ಶುಭ ಸಂಖ್ಯೆ: 6

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937