Horoscope Today- ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು?

| Updated By: ಆಯೇಷಾ ಬಾನು

Updated on: May 30, 2021 | 6:42 AM

ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣಪಕ್ಷ, ಪಂಚಮಿ ತಿಥಿ, ಭಾನುವಾರ, ಮೇ 30, 2021 ರಾಶಿ ಭವಿಷ್ಯ.

Horoscope Today- ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು?
ರಾಶಿ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣಪಕ್ಷ, ಪಂಚಮಿ ತಿಥಿ, ಭಾನುವಾರ, ಮೇ 30, 2021. ಉತ್ತರಾಷಾಢ ನಕ್ಷತ್ರ, ರಾಹುಕಾಲ: ಇಂದು ಸಂಜೆ 5:7 ರಿಂದ ಇಂದು ಸಂಜೆ 6:45 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.41. ಸೂರ್ಯಾಸ್ತ: ಸಂಜೆ 6.46.

ತಾ.30-05-2021 ರ ಭಾನುವಾರದ ರಾಶಿಭವಿಷ್ಯ.

ಮೇಷ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 5

ವೃಷಭ: ವಾಸಸ್ಥಾನ,ಉದ್ಯೋಗಸ್ಥಾನ ಬದಲಾವಣೆಯ ಯೋಗವಿದೆ.ಕೌಟುಂಬಿಕ ಸಮಸ್ಯೆಗಳು ದೂರಾಗುವವು. ವ್ಯವಹಾರಿಕ ಸೂಕ್ಷ್ಮತೆಯಿಂದ ಹಾನಿ ತಪ್ಪಿಸಿರಿ. ವೃಥಾಚಿಂತೆ ಇರುವದು. ಹೊಸ ವ್ಯವಹಾರಗಳು ಬೇಡ. ಶುಭ ಸಂಖ್ಯೆ: 9

ಮಿಥುನ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 4

ಕರ್ಕ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವದು.ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ.ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು.ನ್ಯಾಯಾಲಯದಲ್ಲಿ ಜಯ ದೊರೆಯುವದು. ವಿದ್ಯೆಯಲ್ಲಿ ಸಾಧನೆ ಇರುವದು.
8

ಸಿಂಹ: ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕಠಿಣ ಪರಿಸ್ಥಿತಿಯಲ್ಲಿಯೂ ದುರ್ಲಭ ಸಾಧನೆ ಮಾಡುವಿರಿ. ಪರಿವಾರದಲ್ಲಿ ಸಂತಸವಿರುವದು. ಕೇಡುಬಯಸುವ ಜನರಿಗೆ ಅಂಜದೇ ಮುಂದುವರಿಯಿರಿ. ಶುಭ ಸಂಖ್ಯೆ:  3

ಕನ್ಯಾ: ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 7

ತುಲಾ: ಬದಲಾವಣೆಯನ್ನು ಸಹಜವಾಗಿ ಸ್ವೀಕರಿಸಿ. ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸುವಿರಿ. ಸಾಮಜಿಕ ಗೌರವಗಳು ಅರಸಿಕೊಂಡು ಬರಲಿವೆ. ಮಾಲೀಕತ್ವದ ಆಸ್ತಿ ಕೈತಪ್ಪದಂತೆ ಎಚ್ಚರಿಕೆ ವಹಿಸಿರಿ. ಧನದ ಅಪವ್ಯಯ ಆಗದಂತೆ ನೋಡಿರಿ ಶುಭ ಸಂಖ್ಯೆ: 2

ವೃಶ್ಚಿಕ: ಹೊಸ ಆಲೋಚನೆಯೊಂದು ಕಾರ್ಯರೂಪಕ್ಕೆ ಬರುವದು. ಸಹವರ್ತಿಗಳ ಅಸಹಕಾರ ಇದ್ದರೂ ತೊಂದರೆ ಆಗಲಾರದು. ಅನಪೇಕ್ಷಿತ ಸ್ಥಾನ ಬದಲಾವಣೆ ಆಗುವ ಸಾಧ್ಯತೆ ಇದೆ. ಸರಿಯಾದ ಧ್ಯೇಯದಿಂದ ಸಮಾಧಾನ ಇರುವದು. ಶುಭ ಸಂಖ್ಯೆ: 6

ಧನು: ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವದು ಅಮಾಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವದು. ಕೈಗೊಂಡ ಕಾರ್ಯ ಯಶ ಕಾಣುವದು. ಶುಭ ಸಂಖ್ಯೆ: 1

ಮಕರ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವದು. ಶುಭ ಸಂಖ್ಯೆ: 5

ಕುಂಭ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 9

ಮೀನ: ಹಿರಿಯರ ಮಾರ್ಗದರ್ಶನ ದೊರೆಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವದು. ಶುಭ ಸಂಖ್ಯೆ: 4

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937