ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣಪಕ್ಷ, ಷಷ್ಠಿ ತಿಥಿ, ಸೋಮವಾರ, ಮೇ 31, 2021. ಶ್ರವಣ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.18 ರಿಂದ ಇಂದು ಬೆಳಿಗ್ಗೆ 8.56 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.40. ಸೂರ್ಯಾಸ್ತ: ಸಂಜೆ 6.46.
ತಾ.31-05-2021 ರ ಸೋಮವಾರದ ರಾಶಿಭವಿಷ್ಯ
ಮೇಷ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು. ಶುಭ ಸಂಖ್ಯೆ: 2
ವೃಷಭ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 9
ಮಿಥುನ: ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ. ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ. ಶುಭ ಸಂಖ್ಯೆ: 6
ಕಟಕ: ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ. ವೈವಾಹಿಕ ಚಿಂತೆ ಇರುವುದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ದರ್ಶನ ಯೋಗವಿದೆ. ಶುಭ ಸಂಖ್ಯೆ: 7
ಸಿಂಹ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವುದು. ಶುಭ ಸಂಖ್ಯೆ: 1
ಕನ್ಯಾ: ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಅನವಶ್ಯಕ ಭಯ ಅಗತ್ಯವಿಲ್ಲ, ನಿಮ್ಮ ಸೇವೆ ಫಲ ನೀಡುವುದು. ಸಂಕಷ್ಟದ ಮಧ್ಯೆಯೂ ಸಂತೋಷದ ದಿನಗಳಿವೆ. ಆಗಂತುಕರೊಂದಿಗೆ ಜಾಗೃತೆ ಅಗತ್ಯ. ಶುಭ ಸಂಖ್ಯೆ: 8
ತುಲಾ: ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಗಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ. ಶತ್ರುಬಾಧೆ ಕಂಡುಬರುವುದು. ಆರೋಗ್ಯದ ಮೇಲೆ ನಿಗಾ ಇರಲಿ. ಶುಭ ಸಂಖ್ಯೆ: 3
ವೃಶ್ಚಿಕ: ಸಹನೆ ಇಲ್ಲದ ಆತುರದ ನಡೆಯಿಂದ ಹಾನಿ ಸಂಭವ ಎಚ್ಚರಿಕೆ ವಹಿಸಿರಿ. ಅನೀರೀಕ್ಷಿತವಾಗಿ ಬರುವ ವಿಘ್ನಗಳು ತಾವಾಗಿಯೇ ಪರಿಹಾರ ಕಾಣುವವು. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಶುಭ ಸಂಖ್ಯೆ: 5
ಧನು: ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವುದು. ಶುಭ ಸಂಖ್ಯೆ: 4
ಮಕರ: ವ್ಯವಹಾರಿಕ ಏಳ್ಗೆ ಇರುವುದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ.ವಿವಿಧ ಸೌಭಾಗ್ಯಪ್ರಾಪ್ತಿ. ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ವಾಹನ, ಮಶಿನರಿಗಳಿಂದ ತೊಂದರೆ. ಶುಭ ಸಂಖ್ಯೆ: 2
ಕುಂಭ: ಯಶಸ್ಸು. ಶ್ರಮಕ್ಕೆ ತಕ್ಕ ಲಾಭ, ಕೀರ್ತಿ, ಕೃಷಿಯಲ್ಲಿ ಉತ್ತಮ ಸಾಧನೆ, ಮನೆಯಲ್ಲಿ ಮಂಗಲಕಾರ್ಯ, ಬುಧ, ಮಂಗಳ ಯೋಗ ಶುಭದಾಯಕ ಆದರೂ ಕಿರಿಕಿರಿ ಸಂಭವ. ಪರಿಹಾರಕ್ಕಾಗಿ ಅನ್ನದಾನ ಮಾಡಿರಿ. ಶುಭ ಸಂಖ್ಯೆ: 1
ಮೀನ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 9