AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರು ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ

Horoscope ನವೆಂಬರ್ 01, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರು ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ
ದಿನ ಭವಿಷ್ಯ
TV9 Web
| Edited By: |

Updated on: Nov 01, 2021 | 7:09 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಶರದೃತು, ಕೃಷ್ಣಪಕ್ಷ, ಏಕಾದಶಿ ತಿಥಿ, ಸೋಮವಾರ, ನವೆಂಬರ್ 01, 2021. ಪುಬ್ಬೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.40 ರಿಂದ ಇಂದು ಬೆಳಿಗ್ಗೆ 9.06 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.14. ಸೂರ್ಯಾಸ್ತ: ಸಂಜೆ 5.44

ತಾ.01-11-2021 ರ ಸೋಮವಾರದ ರಾಶಿಭವಿಷ್ಯ. “ಕನ್ನಡ ರಾಜ್ಯೋತ್ಸವದ ಶುಭಾಶಯಗಳು”

ಮೇಷ: ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಲ್ಪಧನಲಾಭವಾದರೂ ಹಳೆಯ ಸಾಲ ತೀರುವದು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 9

ವೃಷಭ: ಕಾಯಕನಿಷ್ಠೆ ನಿಮಗೇ ಹೊರೆಯಾಗದಂತೆ ನೋಡಿಕೊಳ್ಳಿರಿ. ನಿರಂತರ ದುಡಿಮೆಯಿಂದ ಅನಾರೋಗ್ಯ ಅಥವಾ ಮಾನಸಿಕ ಕಿರಿಕಿರಿ ಆಗುವ ಸಂಭವವಿದೆ. ಹಣಕಾಸಿನಿನ ವ್ಯವಹಾರದಲ್ಲಿ ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 1

ಮಿಥುನ: ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಶುಭ ಸಂಖ್ಯೆ: 8

ಕಟಕ: ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ. ಶುಭ ಸಂಖ್ಯೆ: 3

ಸಿಂಹ: ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 7

ಕನ್ಯಾ: ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಉನ್ನತ ಶಿಕ್ಷಣದ ಕನಸು ಈಡೇರುವುದು. ಶುಭ ಸಂಖ್ಯೆ: 4

ತುಲ: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 5

ವೃಶ್ಚಿಕ: ಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅಪೂರ್ಣ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಮೋಸಮಾಡುವ ಸಂಭವವಿದೆ. ದೂರ ಪ್ರಯಾಣ ಅಥವಾ ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 9

ಧನು: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 2

ಮಕರ: ವ್ಯವಹಾರಿಕ ಏಳ್ಗೆ ಇರುವದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ.ವಿವಿಧ ಸೌಭಾಗ್ಯಪ್ರಾಪ್ತಿ..ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ವಾಹನ, ಮಶಿನರಿಗಳಿಂದ ತೊಂದರೆ. ಶುಭ ಸಂಖ್ಯೆ: 7

ಕುಂಭ: ಆರಂಭದಲ್ಲಿ ಹರ್ಷ, ಉತ್ಸಾಹ ಇರುವದು ಕೊನೆಗೆ ಮನೋವ್ಯಥೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವದು. ಗ್ರಹೋಪಯೋಗಿ ವಸ್ತುಗಳ ಖರೀದಿ, ಮನೆ ರಿಪೇರಿ ಮೊದಲಾದ ಕೆಲಸಗಳಾಗುವವು. ಶ್ರೀಲಕ್ಷ್ಮೀಸ್ತೋತ್ರ ಪಠಿಸಿರಿ. ಶುಭ ಸಂಖ್ಯೆ: 3

ಮೀನ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 1

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?