Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ ಸಿಗಲಿದೆ
Horoscope ನವೆಂಬರ್ 02, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಶರದೃತು, ಕೃಷ್ಣಪಕ್ಷ, ದ್ವಾದಶಿ ತಿಥಿ, ಮಂಗಳವಾರ, ನವೆಂಬರ್ 02, 2021. ಉತ್ತರೆ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 2.51 ರಿಂದ ಇಂದು ಸಂಜೆ 4.17 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.14. ಸೂರ್ಯಾಸ್ತ: ಸಂಜೆ 5.44
ತಾ.02-11-2021 ರ ಮಂಗಳವಾರದ ರಾಶಿಭವಿಷ್ಯ.
ಮೇಷ: ಗುರಿಸಾಧನೆಗೆ ಇದು ಸೂಕ್ತ ಸಮಯ. ಪ್ರಯತ್ನಿಸಿದ ಕಾರ್ಯಗಳು ಕೈಗೂಡುವವು. ವಿದ್ಯಾರ್ಥಿಗಳಿಗೆ ಉನ್ನತ ಪ್ರಶಸ್ತಿ ದೊರಕುವ ಸಾಧ್ಯತೆ ಇರುವುದು. ಶುಭ ಸಂಖ್ಯೆ: 3
ವೃಷಭ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 9
ಮಿಥುನ: ಅನಿರೀಕ್ಷಿತ ಧನಲಾಭವಾಗುವುದು. ಬುದ್ಧಿಕೌಶಲ್ಯದಿಂದ ಉದ್ಯೋಗದಲ್ಲಿ ಬಡ್ತಿ ಕಂಡುಬರುವುದು. ಸಿಟ್ಟಿನ ಸ್ವಭಾವದಿಂದ ತೊದರೆಯಾಗುವ ಸಾಧ್ಯತೆ ಇದೆ. ಕಾರ್ಯಕ್ಷಮತೆಗೆ ತಕ್ಕ ಫಲ ದೊರೆಯುವುದು. ಶುಭ ಸಂಖ್ಯೆ: 5
ಕಟಕ: ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ.ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ. ಶುಭ ಸಂಖ್ಯೆ: 2
ಸಿಂಹ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 7
ಕನ್ಯಾ: ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವುದು. ಅಡೆತಡೆಗಳ ನಿವಾರಣೆಯಾಗುವುದು. ನಿಶ್ಚಿತ ಅವಧಿಯ ಪರೀಕ್ಷೆಗಳು ಎದುರಾದರೂ ಬಲಗುಂದುವದಿಲ್ಲ. ಹಿರಿಯರ ಸಲಹೆ ದೊರೆಯುವುದು. ಶುಭ ಸಂಖ್ಯೆ: 4
ತುಲಾ: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂತ ಅಧಿಕ ಖರ್ಚು ಇರುವುದು. ಶುಭ ಸಂಖ್ಯೆ: 1
ವೃಶ್ಚಿಕ: ಧಾರ್ಮಿಕ ಕ್ಷೇತ್ರದಲ್ಲಿ ಗೌರವ ಸಮ್ಮಾನಗಳು ದೊರೆಯುವವು. ಅತಿಯಾದ ನಿರೀಕ್ಷೆಯಿಂದ ಅಸಮಾಧಾನ ಕಂಡುಬರುವುದು. ದೂರುವವರೇ ಹೊಗಳಿದರೂ ನೆಮ್ಮದಿ ಇರಲಾರದು. ಸ್ವಯಂ ಪ್ರತಿಷ್ಟೆಗೆ ಧನವ್ಯಯ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 8
ಧನು: ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 6
ಮಕರ: ಅನವಶ್ಯಕ ಅಲೆದಾಟದ ಸಾಧ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಶುಭ ಸಂಖ್ಯೆ: 1
ಕುಂಭ: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 9
ಮೀನ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು. ಶುಭ ಸಂಖ್ಯೆ: 4