ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಶರದೃತು, ಕೃಷ್ಣಪಕ್ಷ, ತ್ರಯೋದಶಿ ತಿಥಿ, ಬುಧವಾರ, ನವೆಂಬರ್ 03, 2021. ಹಸ್ತ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 11.59 ರಿಂದ ಇಂದು ಮಧ್ಯಾಹ್ನ 1.25 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.15. ಸೂರ್ಯಾಸ್ತ: ಸಂಜೆ 5.43
ತಾ.03-11-2021 ರ ಬುಧವಾರದ ರಾಶಿಭವಿಷ್ಯ.
ಮೇಷ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 6
ವೃಷಭ: ಉದರಬೇನೆ ಬರುವ ಸಾಧ್ಯತೆ ಇದೆ ಆರೋಗ್ಯದ ಕಾಳಜಿವಹಿಸಿ. ಬಂಧುಮಿತ್ರರ ಭೇಟಿ, ಮನೆಯಲ್ಲಿ ಮಂಗಲಕಾರ್ಯ ಜರುಗುವ ಯೋಗವಿದೆ. ಕೋರ್ಟ್ನಲ್ಲಿರುವ ವ್ಯಾಜ್ಯಗಳು ಕೊನೆಗೊಳ್ಳುವವು. ಶುಭ ಸಂಖ್ಯೆ: 1
ಮಿಥುನ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 9
ಕಟಕ: ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಶುಭ ಸಂಖ್ಯೆ: 2
ಸಿಂಹ: ಸಾಲಗಾರರ ತೊಂದರೆ ಇರುವುದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವುದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ. ಶುಭ ಸಂಖ್ಯೆ: 8
ಕನ್ಯಾ: ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿಯು ಉತ್ತಮ ಫಲಕೊಡುವುದು. ಹಳೆಯ ಬಾಕಿ ವಸೂಲಾಗುವುದು. ವ್ಯಾಜ್ಯಗಳು ಅಂತ್ಯಕಾಣುವವು. ಗ್ರಹ ಸೌಖ್ಯವಿರುವುದು. ಶುಭ ಸಂಖ್ಯೆ: 4
ತುಲಾ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 5
ವೃಶ್ಚಿಕ: ಸಹನೆಗೆ ತಕ್ಕ ಫಲ ದೊರೆಯುವುದು. ಬಹು ದಿನದ ಕನಸು ನನಸಾಗುವ ಕಾಲವಿದೆ. ಕೊರ್ಟಿನಲ್ಲಿದ್ದ ವ್ಯಾಜ್ಯಗಳಲ್ಲಿ ಜಯ ದೊರೆಯುವುದು. ಸಂತಾನಫಲದ ಅಪೇಕ್ಷೆ ಈಡೇರುವುದು. ಆರ್ಥಿಕ ವ್ಯವಹಾರಗಳ ಅದೃಷ್ಟ ಲಾಭತರುವವು. ಶುಭ ಸಂಖ್ಯೆ: 6
ಧನು: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ:7
ಮಕರ: ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಶುಭ ಸಂಖ್ಯೆ: 3
ಕುಂಭ: ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವುದು. ಸಹನೆಯಿಂದ ವ್ಯವಹರಿಸಿರಿ. ಗುರುಬಲ ವೃದ್ಧಿಸುವುದು. ಮದುವೆಯ ಸಂಭ್ರಮದ ವಾತಾವರಣ ಕಂಡುಬರುವುದು. ಹಿರಿಯರ ಮಾತಿನಂತೆ ನಡಯುವುದು ಉತ್ತಮ. ಶುಭ ಸಂಖ್ಯೆ: 1
ಮೀನ: ವ್ಯಥಾ ಚಿಂತೆ, ತಪ್ಪು ಕಲ್ಪನೆ, ನಿಷ್ಟುರ ಮಾತುಗಳನ್ನು ಕೇಳುವ ಸಂಭವ, ಜನ್ಮಸ್ಥ ಶುಕ್ರ ಇರುವುದರಿಂದ ಆರ್ಥಿಕ ಸುಭದ್ರತೆ ಇರುವುದು. ವಿದ್ಯಾರ್ಥಿಗಳಿಗೆ ಪರಿಶ್ರಮ ಅವಶ್ಯಕ. ಮನೆಯಲ್ಲಿ ಸಂತೋಷವಿರುವುದು. ಗೋಸೇವೆಯಿಂದ ಕಷ್ಟಪರಿಹಾರ. ಶುಭ ಸಂಖ್ಯೆ: 5