Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಗ್ರಹಗಳ ಶುಭ ದೃಷ್ಟಿ, ಶುಭವಾಗಿ ಶುಭಫಲಗಳು ಕಂಡುಬರುವವು

| Updated By: Vinay Bhat

Updated on: Nov 04, 2021 | 6:34 AM

Horoscope ನವೆಂಬರ್ 04, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಗ್ರಹಗಳ ಶುಭ ದೃಷ್ಟಿ, ಶುಭವಾಗಿ ಶುಭಫಲಗಳು ಕಂಡುಬರುವವು
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಶರದೃತು, ಕೃಷ್ಣಪಕ್ಷ, ಚತುರ್ದಶಿ ತಿಥಿ, ಗುರುವಾರ, ನವೆಂಬರ್ 04, 2021. ಚಿತ್ತೆ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.25 ರಿಂದ ಇಂದು ಮಧ್ಯಾಹ್ನ 2.51 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.15. ಸೂರ್ಯಾಸ್ತ: ಸಂಜೆ 5.43

ತಾ.04-11-2021 ರ ಗುರುವಾರದ ರಾಶಿಭವಿಷ್ಯ.

ಮೇಷ: ಗ್ರಹಗಳ ಶುಭ ದೃಷ್ಟಿ, ಶುಭವಾಗಿ ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 9

ವೃಷಭ: ಪರಿವಾರದಲ್ಲಿ ಹೊಸಕಳೆ ಬರುವುದು. ಕುಟುಂಬದಲ್ಲಿ ಸೌಖಯ ಇರುವುದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು. ಶುಭ ಸಂಖ್ಯೆ: 2

ಮಿಥುನ: ಕಾಯಕನಿಷ್ಠೆ ನಿಮಗೇ ಹೊರೆಯಾಗದಂತೆ ನೋಡಿಕೊಳ್ಳಿರಿ. ನಿರಂತರ ದುಡಿಮೆಯಿಂದ ಅನಾರೋಗ್ಯ ಅಥವಾ ಮಾನಸಿಕ ಕಿರಿಕಿರಿ ಆಗುವ ಸಂಭವವಿದೆ. ಹಣಕಾಸಿನಿನ ವ್ಯವಹಾರದಲ್ಲಿ ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 8

ಕಟಕ: ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ.ವೈವಾಹಿಕ ಚಿಂತೆ ಇರುವದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ದರ್ಶನ ಯೋಗವಿದೆ. ಶುಭ ಸಂಖ್ಯೆ: 1

ಸಿಂಹ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 3

ಕನ್ಯಾ: ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರುವದು. ಅಹಂಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗವಿದೆ ಎಚ್ಚರಿಕೆ ವಹಿಸಿರಿ. ನಮೃತೆಗೆ ಯೋಗ್ಯ ಸಮ್ಮಾನ ದೊರೆಯುವುದು. ಶುಭ ಸಂಖ್ಯೆ: 6

ತುಲಾ: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವುದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವವು. ಶುಭ ಸಂಖ್ಯೆ: 7

ವೃಶ್ಚಿಕ: ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ. ಶುಭ ಸಂಖ್ಯೆ: 7

ಧನು: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 4

ಮಕರ: ಅಪರಿಮಿತ ಖರ್ಚು ತೋರಿದರೂ ಅಡಚಣೆಯಾಗುವ ಸಂಭವವಿಲ್ಲದೆ. ಸ್ಥಾನಮಾನಗಳೂ ಭದ್ರವಾಗಿ ಸಾಂಸಾರಿಕ ದೃಷ್ಟಿಯಲ್ಲೂ ಸುಖದಾಯಕ, ವಿಶೆಷ ಪ್ರಯತ್ನದಿಂದ ವ್ಯವಹಾರ ಸಿದ್ಧಿ ಇರುವುದು. ಶುಭ ಸಂಖ್ಯೆ: 5

ಕುಂಭ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ. ಶುಭ ಸಂಖ್ಯೆ: 2

ಮೀನ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 9

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937