Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ

Horoscope ನವೆಂಬರ್ 05, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ
ದಿನ ಭವಿಷ್ಯ
Follow us
TV9 Web
| Updated By: Vinay Bhat

Updated on: Nov 05, 2021 | 6:34 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಶುಕ್ಲಪಕ್ಷ, ಪಾಡ್ಯ ತಿಥಿ, ಶುಕ್ರವಾರ, ನವೆಂಬರ್ 05, 2021. ವಿಶಾಖ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.33 ರಿಂದ ಇಂದು ಬೆಳಿಗ್ಗೆ 11.58 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.16. ಸೂರ್ಯಾಸ್ತ: ಸಂಜೆ 5.43

ತಾ.05-11-2021 ರ ಶುಕ್ರವಾರದ ರಾಶಿಭವಿಷ್ಯ.

ಮೇಷ: ಧನಲಾಭ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಹಣದ ಅವಶ್ಯಕತೆ ಹೆಚ್ಚಾಗಲಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 5

ವೃಷಭ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ದಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರವೃದ್ಧಿಯಾಗುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 9

ಮಿಥುನ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 4

ಕಟಕ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 8

ಸಿಂಹ: ಮಾನಸಮ್ಮಾನಗಳು ದೊರೆಯುವವು. ಕಂಕಣಬಲ ಕೂಡಿಬರುವುದು. ಮನೋಭಿಲಾಷೆಗಳು ಈಡೇರುವವು. ಆದರೆ ಉದ್ಯೋಗದಲ್ಲಿ ನಿರಾಸಕ್ತಿ ಇರುವುದು ಮತ್ತು ವ್ಯವಹಾರದಲ್ಲಿ ಅಸಮಾಧಾನ ಕಂಡುಬರುವುದು. ಶುಭ ಸಂಖ್ಯೆ: 3

ಕನ್ಯಾ: ಮಾತಿನಂತೆ ನಡೆದುಕೊಳ್ಳುವ ಪ್ರಯತ್ನ ಮಾಡುವಿರಿ. ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಕೆಲಸ ನಿರ್ವಹಿಲು ಆಗದಂತಹ ಸ್ಥಿತಿ ಬರಬಹುದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 7

ತುಲಾ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುವವು. ಶುಭ ಸಂಖ್ಯೆ: 2

ವೃಶ್ಚಿಕ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 6

ಧನು: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 1

ಮಕರ: ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಶುಭ ಸಂಖ್ಯೆ: 9

ಕುಂಭ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವುದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 7

ಮೀನ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್