Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು

Horoscope ನವೆಂಬರ್ 07, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು
ದಿನ ಭವಿಷ್ಯ
Follow us
TV9 Web
| Updated By: ಆಯೇಷಾ ಬಾನು

Updated on: Nov 07, 2021 | 7:28 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಶುಕ್ಲಪಕ್ಷ, ತದಿಗೆ ತಿಥಿ, ಭಾನುವಾರ, ನವೆಂಬರ್ 07, 2021. ಜ್ಯೇಷ್ಠ ನಕ್ಷತ್ರ, ರಾಹುಕಾಲ: ಇಂದು ಸಂಜೆ 4.16 ರಿಂದ ಇಂದು ಸಂಜೆ 5.41 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.16. ಸೂರ್ಯಾಸ್ತ: ಸಂಜೆ 5.42

ತಾ.06-11-2021 ರ ಭಾನುವಾರದ ರಾಶಿಭವಿಷ್ಯ.

ಮೇಷ: ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 4

ವೃಷಭ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 9

ಮಿಥುನ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು. ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ. ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು. ಶುಭ ಸಂಖ್ಯೆ: 1

ಕಟಕ: ಮಾತಿನಂತೆಯೇ ಎಲ್ಲವೂ ನಡೆಯುವುದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವುದು. ಲಾಭದಾಯಕ ಹುದ್ದೆ ದೊರೆಯುವುದು. ಶುಭ ಸಂಖ್ಯೆ: 3

ಸಿಂಹ: ಪೂರ್ವತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವುದು. ಮೇಲಧಿಕಾರಿಗಳ ಒತ್ತಡ ಬೇಸರ ತರುವುದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವುದು. ಶ್ರಮಕ್ಕೆ ತಕ್ಕ ಲಾಭ ದೊರೆಯುವುದು. ಶುಭ ಸಂಖ್ಯೆ: 7

ಕನ್ಯಾ: ಅನಿಸಿಕೆಗಿಂತ ವಾಸ್ತವ ಬೇರೆ ಇರುವುದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭ ಸಂಖ್ಯೆ: 2

ತುಲಾ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುವವು. ಶುಭ ಸಂಖ್ಯೆ: 6

ವೃಶ್ಚಿಕ: ಹೊಸ ಯೋಜನೆಗೆ ಸಂಬಂಧಿಸಿದಂತೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಶುಭ ಸಂಖ್ಯೆ: 8

ಧನು: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 4

ಮಕರ: ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು. ಶುಭ ಸಂಖ್ಯೆ: 7

ಕುಂಭ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ: 2

ಮೀನ: ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವದು.ಕುಟುಂಬದ ಜವಾಬ್ದಾರಿ ಹೆಚ್ಚುವದು. ಮಕ್ಕಳ ವಿದ್ಯಾಬ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವುದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ. ಶುಭ ಸಂಖ್ಯೆ: 5

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ