Horoscope Today- ದಿನ ಭವಿಷ್ಯ; ಈ ರಾಶಿಯವರ ಆರ್ಥಿಕ ಸ್ಥಿತಿ ಉತ್ತಮವಾಗಿದ್ದರೂ ಅಲ್ಪ ಹಾನಿಯ ಸಂಭವವಿದೆ!

Horoscope ನವೆಂಬರ್ 08, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರ ಆರ್ಥಿಕ ಸ್ಥಿತಿ ಉತ್ತಮವಾಗಿದ್ದರೂ ಅಲ್ಪ ಹಾನಿಯ ಸಂಭವವಿದೆ!
ದಿನ ಭವಿಷ್ಯ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Nov 08, 2021 | 7:44 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಶುಕ್ಲಪಕ್ಷ, ಚೌತಿ ತಿಥಿ, ಸೋಮವಾರ, ನವೆಂಬರ್ 08, 2021. ಮೂಲ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.42 ರಿಂದ ಇಂದು ಬೆಳಿಗ್ಗೆ 9.07 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.17. ಸೂರ್ಯಾಸ್ತ: ಸಂಜೆ 5.42

ತಾ.08-11-2021 ರ ಸೋಮವಾರದ ರಾಶಿಭವಿಷ್ಯ:

ಮೇಷ: ಮನೆಯಲ್ಲಿ ಅಸಮಾಧಾನ ಇರುವುದು. ಕೂಡಿಟ್ಟ ಹಣ ಹಾನಿಯಾಗುವ ಸಂಭವವಿದೆ. ಅಣ್ಣತಮ್ಮಂದಿರಲ್ಲಿ ಸಹಕಾರ ಅತ್ಯಂತ ಅವಶ್ಯಕ. ತೋಟಗಾರಿಕೆ ಫಲಪ್ರದವಾಗಲಿದೆ. ವ್ಯಾಪಾರ ವೃದ್ಧಿಯಾಗುವುದು. ಶುಭ ಸಂಖ್ಯೆ: 5

ವೃಷಭ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವುದು. ಶುಭ ಸಂಖ್ಯೆ: 9

ಮಿಥುನ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 1

ಕಟಕ: ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವುದು. ಸತತ ಪ್ರಯತ್ನವಿಲ್ಲದೇ ಫಲ ದೊರೆಯಲಾರದು. ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬುದ್ದಿಯಿಂದ ತಾಳ್ಮೆಕಳೆದುಕೊಳ್ಳದೇ ಮುಂದುವರೆಯಿರಿ. ಶುಭ ಸಂಖ್ಯೆ: 4

ಸಿಂಹ: ಭವಿಷ್ಯತ್ತಿನ ಉಪೇಕ್ಷೆ ಮಾಡದೇ ಉಳಿತಾಯಕ್ಕೆ ಗಮನಹರಿಸಿರಿ. ಆಪತ್ತುಗಳ ಪರಿಹಾರಕ್ಕಾಗಿ ವ್ಯಥಾ ತಿರುಗಾಟದ ಸಂಭವವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭ ಸಂಖ್ಯೆ: 8

ಕನ್ಯಾ: ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವುದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 3

ತುಲಾ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 7

ವೃಶ್ಚಿಕ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 5

ಧನು: ವಾದ-ವಿವಾದ, ಹಠಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ. ಶುಭ ಸಂಖ್ಯೆ: 2

ಮಕರ: ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವುದು. ಕುಟುಂಬದ ಜವಾಬ್ದಾರಿ ಹೆಚ್ಚುವುದು. ಮಕ್ಕಳ ವಿದ್ಯಾಬ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವುದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ. ಶುಭ ಸಂಖ್ಯೆ: 6

ಕುಂಭ: ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವವು. ಈ ಸಮಯದಲ್ಲಿ ಉತ್ತಮ ಧನಾರ್ಜನೆ ಯಾಗುವುದು ವಿದೇಶಪ್ರಯಾಣ, ಪ್ರೇಮಸಂಭಾಷಣೆ, ದೇವ ಬ್ರ್ರಾಹ್ಮಣ,ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವವು. ಶುಭ ಸಂಖ್ಯೆ: 3

ಮೀನ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ. ಶುಭ ಸಂಖ್ಯೆ: 9

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

Published On - 6:38 am, Mon, 8 November 21

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ