AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಧನು ರಾಶಿಯವರಿಗೆ ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ

Horoscope ನವೆಂಬರ್ 10, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಧನು ರಾಶಿಯವರಿಗೆ ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ
ದಿನ ಭವಿಷ್ಯ
TV9 Web
| Edited By: |

Updated on:Nov 10, 2021 | 7:03 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಶುಕ್ಲಪಕ್ಷ, ಷಷ್ಠಿ ತಿಥಿ, ಬುಧವಾರ, ನವೆಂಬರ್ 10, 2021. ಉತ್ತರಾಷಾಢ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 11.59 ರಿಂದ ಇಂದು ಮಧ್ಯಾಹ್ನ 1.24 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.18. ಸೂರ್ಯಾಸ್ತ: ಸಂಜೆ 5.41

ತಾ.10-11-2021 ರ ಬುಧವಾರದ ರಾಶಿಭವಿಷ್ಯ.

ಮೇಷ: ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವುದು. ಶುಭ ಸಂಖ್ಯೆ: 5

ವೃಷಭ: ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವುದು. ಅಡೆತಡೆಗಳ ನಿವಾರಣೆಯಾಗುವುದು. ನಿಶ್ಚಿತ ಅವಧಿಯ ಪರೀಕ್ಷೆಗಳು ಎದುರಾದರೂ ಬಲಗುಂದುವುದಿಲ್ಲ. ಹಿರಿಯರ ಸಲಹೆ ದೊರೆಯುವುದು. ಶುಭ ಸಂಖ್ಯೆ: 1

ಮಿಥುನ: ಮಾತು ಹಿಡಿತದಲ್ಲಿರಲಿ. ಅನವಶ್ಯಕ ವಾಗ್ವಾದ ಉಂಟಾಗುವ ಸಂಭವವಿದೆ. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಹಿತೈಷಿಗಳ ಸಲಹೆಯಂತೆ ಮುಂದುವರೆಯಿರಿ. ಶುಭ ಸಂಖ್ಯೆ: 9

ಕಟಕ: ಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅಪೂರ್ಣ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಮೋಸಮಾಡುವ ಸಂಭವವಿದೆ. ದೂರ ಪ್ರಯಾಣ ಅಥವಾ ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 2

ಸಿಂಹ: ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 7

ಕನ್ಯಾ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 3

ತುಲಾ: ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ಮನೋಚಿಂತಿತ ಕಾರ್ಯ ಕೈಗೂಡುವುದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ. ಶುಭ ಸಂಖ್ಯೆ: 4

ವೃಶ್ಚಿಕ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 8

ಧನು: ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ. ಸಾಧನೆಗೆ ಸೂಕ್ತ ಅವಕಾಶ ದೊರೆಯುವುದು. ಹಣಕಾಸಿನ ತೊಂದರೆಗಳು ಪರಿಹಾರವಾಗುವವು. ವ್ಯವಹಾರಗಳಲ್ಲಿ ಗೌಪ್ಯತೆ ಇರಲಿ. ಹಿತಶತ್ರುಗಳಿಂದ ತೊಂದರೆಯಾಗುವ ಸಧ್ಯತೆ ಇದೆ. ಶುಭ ಸಂಖ್ಯೆ: 1

ಮಕರ: ಶಾಂತಚಿತ್ತರಾಗಿ ಕೆಲಸ ನಿರ್ವಹಿಸಿರಿ. ಹೊಸ ವ್ಯಾಪಾರ, ಉದ್ಯೋಗದ ಅವಕಾಶಗಳು ಕೂಡಿ ಬರುವವು. ಹಳೆಯ ಸಮಸ್ಯೆಗಳು ಪರಿಹಾರವಾಗುವವು. ಶುಭಕಾರ್ಯದಲ್ಲಿ ಪಾಲ್ಗೊಳ್ಳುವಿರಿ. ಶುಭ ಸಂಖ್ಯೆ: 6

ಕುಂಭ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 7

ಮೀನ: ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ. ಶುಭ ಸಂಖ್ಯೆ: 5

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

Published On - 7:00 am, Wed, 10 November 21

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ