Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗಲಿದೆ

Horoscope ನವೆಂಬರ್ 11, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗಲಿದೆ
ದಿನ ಭವಿಷ್ಯ
Follow us
TV9 Web
| Updated By: shruti hegde

Updated on: Nov 11, 2021 | 6:59 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಶುಕ್ಲಪಕ್ಷ, ಸಪ್ತಮಿ ತಿಥಿ, ಗುರುವಾರ, ನವೆಂಬರ್ 11, 2021. ಶ್ರವಣ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.24 ರಿಂದ ಇಂದು ಮಧ್ಯಾಹ್ನ 2.49 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.18. ಸೂರ್ಯಾಸ್ತ: ಸಂಜೆ 5.41

ತಾ.11-11-2021 ರ ಗುರುವಾರದ ರಾಶಿಭವಿಷ್ಯ.

ಮೇಷ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 5

ವೃಷಭ: ಮಾತು ಹಿಡಿತದಲ್ಲಿರಲಿ. ಅನವಶ್ಯಕ ವಾಗ್ವಾದ ಉಂಟಾಗುವ ಸಂಭವವಿದೆ. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಹಿತೈಷಿಗಳ ಸಲಹೆಯಂತೆ ಮುಂದುವರೆಯಿರಿ. ಶುಭ ಸಂಖ್ಯೆ: 8

ಮಿಥುನ: ಶಾಂತಚಿತ್ತರಾಗಿ ಕೆಲಸ ನಿರ್ವಹಿಸಿರಿ. ಹೊಸ ವ್ಯಾಪಾರ, ಉದ್ಯೋಗದ ಅವಕಾಶಗಳು ಕೂಡಿ ಬರುವವು. ಹಳೆಯ ಸಮಸ್ಯೆಗಳು ಪರಿಹಾರವಾಗುವವು. ಶುಭಕಾರ್ಯದಲ್ಲಿ ಪಾಲ್ಗೊಳ್ಳುವಿರಿ. ಶುಭ ಸಂಖ್ಯೆ: 2

ಕಟಕ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 9

ಸಿಂಹ: ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ. ಶುಭ ಸಂಖ್ಯೆ: 3

ಕನ್ಯಾ: ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ. ಸಾಧನೆಗೆ ಸೂಕ್ತ ಅವಕಾಶ ದೊರೆಯುವುದು. ಹಣಕಾಸಿನ ತೊಂದರೆಗಳು ಪರಿಹಾರವಾಗುವವು. ವ್ಯವಹಾರಗಳಲ್ಲಿ ಗೌಪ್ಯತೆ ಇರಲಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 4

ತುಲಾ: ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವುದು. ಅಡೆತಡೆಗಳ ನಿವಾರಣೆ ಯಾಗುವುದು. ನಿಶ್ಚಿತ ಅವಧಿಯ ಪರೀಕ್ಷೆಗಳು ಎದುರಾದರೂ ಬಲಗುಂದುವದಿಲ್ಲ. ಹಿರಿಯರ ಸಲಹೆ ದೊರೆಯುವುದು. ಶುಭ ಸಂಖ್ಯೆ: 7

ವೃಶ್ಚಿಕ: ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವುದು. ಶುಭ ಸಂಖ್ಯೆ: 6

ಧನು: ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ಮನೋಚಿಂತಿತ ಕಾರ್ಯ ಕೈಗೂಡುವುದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ. ಶುಭ ಸಂಖ್ಯೆ: 5

ಮಕರ: ಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅಪೂರ್ಣ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಮೋಸಮಾಡುವ ಸಂಭವವಿದೆ. ದೂರ ಪ್ರಯಾಣ ಅಥವಾ ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 1

ಕುಂಭ: ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 2

ಮೀನ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 7

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ