Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ

Horoscope ನವೆಂಬರ್ 12, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ
ದಿನ ಭವಿಷ್ಯ
Follow us
TV9 Web
| Updated By: Vinay Bhat

Updated on: Nov 12, 2021 | 6:40 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಶುಕ್ಲಪಕ್ಷ, ಅಷ್ಟಮಿ ತಿಥಿ, ಶುಕ್ರವಾರ, ನವೆಂಬರ್ 12, 2021. ಧನಿಷ್ಥೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.34 ರಿಂದ ಇಂದು ಬೆಳಿಗ್ಗೆ 11.59 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.19. ಸೂರ್ಯಾಸ್ತ: ಸಂಜೆ 5.40

ತಾ.12-11-2021 ರ ಶುಕ್ರವಾರದ ರಾಶಿಭವಿಷ್ಯ.

ಮೇಷ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 9

ವೃಷಭ: ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವವು. ಸಂಬಂಧಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 1

ಮಿಥುನ: ಒಳ್ಳೆಯ ಮಾತುಗಳಿಂದ ಸಂಬಂಧ ಸುಧಾರಿಸುವುದು. ಸ್ನೇಹಿತರಲ್ಲಿಯ ಮನಸ್ತಾಪ ದೂರಾಗುವುದು. ಶಕ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವುದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ. ಶುಭ ಸಂಖ್ಯೆ: 5

ಕಟಕ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು. ಶುಭ ಸಂಖ್ಯೆ: 7

ಸಿಂಹ: ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿಯು ಉತ್ತಮ ಫಲಕೊಡುವುದು. ಹಳೆಯ ಬಾಕಿ ವಸೂಲಾಗುವುದು. ವ್ಯಾಜ್ಯಗಳು ಅಂತ್ಯಕಾಣುವವು. ಗ್ರಹ ಸೌಖ್ಯವಿರುವುದು. ಶುಭ ಸಂಖ್ಯೆ: 3

ಕನ್ಯಾ: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವುದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವವು. ಶುಭ ಸಂಖ್ಯೆ: 8

ತುಲಾ: ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 4

ವೃಶ್ಚಿಕ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮರ್ಥ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 6

ಧನು: ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವುದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 2

ಮಕರ: ವ್ಯಾಪಾರಾದಿ ಉದ್ಯಮಗಳಲ್ಲಿ ಪ್ರಗತಿಯಿದ್ದು ಧನಲಾಭ, ಐಶ್ವರ್ಯವೃದ್ಧಿಯಿದೆ. ಆದರೆ ವ್ಯವಹಾರಿಕ ಕಿರಿಕಿರಿ ಇರುವದು. ಅನಿರೀಕ್ಷಿತ ಧನಲಾಭವೂ ಇದೆ. ಕೈಗೊಂಡ ಕಾರ್ಯಗಳಿಗೆ ವಿಘ್ನ ತೋರಿದರೂ ನೆರವೇರುತ್ತದೆ. ಶುಭ ಸಂಖ್ಯೆ: 1

ಕುಂಭ: ಅಪರಿಮಿತ ಖರ್ಚು ತೋರಿದರೂ ಅಡಚಣೆಯಾಗುವ ಸಂಭವವಿಲ್ಲದೆ. ಸ್ಥಾನಮಾನಗಳೂ ಭದ್ರವಾಗಿ ಸಾಂಸಾರಿಕ ದೃಷ್ಟಿಯಲ್ಲೂ ಸುಖದಾಯಕ, ವಿಶೆಷ ಪ್ರಯತ್ನದಿಂದ ವ್ಯವಹಾರ ಸಿದ್ಧಿ ಇರುವುದು. ಶುಭ ಸಂಖ್ಯೆ: 9

ಮೀನ: ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವುದು. ಗುರುಬಲ ವೃದ್ಧಿಸುವುದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ