Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಸಾಮಾಜಿಕ ಕಾರ್ಯಗಳಿಂದ ಗೌರವಾದರಗಳು ದೊರೆಯುವವು

Horoscope ನವೆಂಬರ್ 13, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಸಾಮಾಜಿಕ ಕಾರ್ಯಗಳಿಂದ ಗೌರವಾದರಗಳು ದೊರೆಯುವವು
ದಿನ ಭವಿಷ್ಯ
Follow us
TV9 Web
| Updated By: Vinay Bhat

Updated on: Nov 13, 2021 | 6:36 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಶುಕ್ಲಪಕ್ಷ, ಅಷ್ಟಮಿ ತಿಥಿ, ಶನಿವಾರ, ನವೆಂಬರ್ 13, 2021. ಶತಭಿಷೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9.09 ರಿಂದ ಇಂದು ಬೆಳಿಗ್ಗೆ 10.34 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.19. ಸೂರ್ಯಾಸ್ತ: ಸಂಜೆ 5.40

ತಾ.13-11-2021 ರ ಶನಿವಾರದ ರಾಶಿಭವಿಷ್ಯ.

ಮೇಷ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 5

ವೃಷಭ: ಯಾವುದೇ ಅಡೆತಡೆ ಇಲ್ಲದ ನಿರಾತಂಕ ಜೀವನ ಇರುವುದು. ಸಾಮಾಜಿಕ ಕಾರ್ಯಗಳಿಂದ ಗೌರವಾದರಗಳು ದೊರೆಯುವವು. ಆಶೆಗೆ ತಕ್ಕಂತೆ ಫಲಗಳು ಕೈಗೂಡುವವು. ಬಂಧುಗಳಲ್ಲಿ ಮನಸ್ತಾಪ ಕಂಡುಬರುವುದು. ಶುಭ ಸಂಖ್ಯೆ: 8

ಮಿಥುನ: ಮನೆಯಲ್ಲಿ ಅಸಮಾಧಾನ ಇರುವುದು. ಕೂಡಿಟ್ಟ ಹಣ ಹಾನಿಯಾಗುವ ಸಂಭವವಿದೆ. ಅಣ್ಣತಮ್ಮಂದಿರಲ್ಲಿ ಸಹಕಾರ ಅತ್ಯಂತ ಅವಶ್ಯಕ. ತೋಟಗಾರಿಕೆ ಫಲಪ್ರದವಾಗಲಿದೆ. ವ್ಯಾಪಾರ ವೃದ್ಧಿಯಾಗುವುದು. ಶುಭ ಸಂಖ್ಯೆ: 2

ಕಟಕ: ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಶುಭ ಸಂಖ್ಯೆ: 7

ಸಿಂಹ: ಒಳ್ಳೆಯ ಮಾತುಗಳಿಂದ ಸಂಬಂಧ ಸುಧಾರಿಸುವುದು. ಸ್ನೇಹಿತರಲ್ಲಿಯ ಮನಸ್ತಾಪ ದೂರಾಗುವುದು. ಶಕ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವುದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ. ಶುಭ ಸಂಖ್ಯೆ: 4

ಕನ್ಯಾ: ವಸ್ತು-ವಾಹನ-ಆಸ್ತಿ ಖರೀದಿ ಯೋಗವಿದೆ. ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಮನೆಯ ಹಿರಿಯರ ಆರೋಗ್ಯದ ಚಿಂತೆ ಇರುವುದು. ಬುದ್ಧಿವಂತಿಕೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 9

ತುಲಾ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 3

ವೃಶ್ಚಿಕ: ವ್ಯವಹಾರಿಕ ಸಂಪರ್ಕಗಳು ಹೆಚ್ಚುವವು ಅದರಂತೆ ಧನದ ಮೂಲಗಳೂ ಹೆಚ್ಚುವವು. ಸಾಲ ಮರುಪಾವತಿಯಾಗುವುದು. ಮನೆಯಲ್ಲಿ ನೆಮ್ಮದಿ ಇರುವುದು. ಅವಿವಾಹಿತರಿಗೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 8

ಧನು: ಅನಿಸಿಕೆಗಿಂತ ವಾಸ್ತವ ಬೇರೆ ಇರುವುದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವುದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭ ಸಂಖ್ಯೆ: 2

ಮಕರ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 5

ಕುಂಭ: ದೈಹಿಕ ಸಮಸ್ಯೆಗಳು ಉಲ್ಬಣವಾಗಿ ಕೆಲಸಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ಮನೆಯಲ್ಲಿ ಕಾರ್ಯ ವಿರೋಧ ಇರುವುದು. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಮಾತಿಗಿಂತ ಕೃತಿಗೆ ಮಹತ್ವ ಕೊಡಿ. ಶುಭ ಸಂಖ್ಯೆ: 6

ಮೀನ: ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಅಗೌರವ ಆಗುವ ಸಂಭವ ಇರುವುದರಿಂದ ಸೂಕ್ಷ್ಮವಾಗಿರುವುದು ಉತ್ತಮ. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ