Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ

Horoscope ನವೆಂಬರ್ 15, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ
ದಿನ ಭವಿಷ್ಯ
Follow us
TV9 Web
| Updated By: preethi shettigar

Updated on: Nov 15, 2021 | 7:03 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಶುಕ್ಲಪಕ್ಷ, ಏಕಾದಶಿ ತಿಥಿ, ಸೋಮವಾರ, ನವೆಂಬರ್ 15, 2021. ಉತ್ತರಾಭಾದ್ರೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.45 ರಿಂದ ಇಂದು ಬೆಳಿಗ್ಗೆ 9.10 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.20. ಸೂರ್ಯಾಸ್ತ: ಸಂಜೆ 5.40

ತಾ.15-11-2021 ರ ಸೋಮವಾರದ ರಾಶಿಭವಿಷ್ಯ. ಮೇಷ: ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವುದು. ಶಾಂತಿ, ನೆಮ್ಮದಿಯುಕ್ತ ಜೀವನ ಇರುವುದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವುದರಿಂದ ಗುರಿ ಮುಟ್ಟುವುದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 3

ವೃಷಭ: ವಾಸಸ್ಥಾನ, ಉದ್ಯೋಗಸ್ಥಾನ ಬದಲಾವಣೆಯ ಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ವ್ಯವಹಾರಿಕ ಸೂಕ್ಷ್ಮತೆಯಿಂದ ಹಾನಿ ತಪ್ಪಿಸಿರಿ. ವೃಥಾಚಿಂತೆ ಇರುವುದು. ಹೊಸ ವ್ಯವಹಾರಗಳು ಬೇಡ. ಶುಭ ಸಂಖ್ಯೆ: 9

ಮಿಥುನ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು. ಶುಭ ಸಂಖ್ಯೆ: 2

ಕಟಕ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 5

ಸಿಂಹ: ಅಭದ್ರತೆ ಕಾಡುವ ಸಂಭವವಿದೆ. ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ. ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವುದು. ಶುಭ ಸಂಖ್ಯೆ: 7

ಕನ್ಯಾ: ಬದಲಾವಣೆಯನ್ನು ಸಹಜವಾಗಿ ಸ್ವೀಕರಿಸಿ. ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸುವಿರಿ. ಸಾಮಾಜಿಕ ಗೌರವಗಳು ಅರಸಿಕೊಂಡು ಬರಲಿವೆ. ಮಾಲೀಕತ್ವದ ಆಸ್ತಿ ಕೈತಪ್ಪದಂತೆ ಎಚ್ಚರಿಕೆ ವಹಿಸಿರಿ. ಧನದ ಅಪವ್ಯಯ ಆಗದಂತೆ ನೋಡಿರಿ. ಶುಭ ಸಂಖ್ಯೆ: 1

ತುಲಾ: ನಿಶ್ಚಿತ ಆರ್ಥಿಕ ಸ್ಥಿತಿ ಇರುವದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. 6

ವೃಶ್ಚಿಕ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 8

ಧನು: ತಪ್ಪುಗಳನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 4

ಮಕರ: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 9

ಕುಂಭ: ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ. ಶುಭ ಸಂಖ್ಯೆ: 2

ಮೀನ: ಆಗುವುದೆಲ್ಲ ಒಳಿತೆಂಬ ಭಾವನೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ. ಮಹಿಳೆಯರಿಗೆ ಮನೆಯಲ್ಲಿನ ಆಂತರಿಕ ವಿರಸ ನೀಗಿ ಸೌಹಾರ್ದತೆ. ನೂತನ ವಿವಾದ ಹುಟ್ಟುಹಾಕದ ಹಾಗೆ ತಾಳ್ಮೆಯಡಿ ವರ್ತನೆ. ಶುಭ ಸಂಖ್ಯೆ: 5

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!