Horoscope Today- ದಿನ ಭವಿಷ್ಯ; ಈ ರಾಶಿಯವರ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ
Horoscope ನವೆಂಬರ್ 16, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಶುಕ್ಲಪಕ್ಷ, ದ್ವಾದಶಿ ತಿಥಿ, ಮಂಗಳವಾರ, ನವೆಂಬರ್ 16, 2021. ರೇವತಿ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 2 ಗಂಟೆ 50 ನಿಮಿಷದಿಂದ ಸಂಜೆ 4 ಗಂಟೆ 14 ನಿಮಿಷದ ವರೆಗೆ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6:21 ನಿಮಿಷ. ಸೂರ್ಯಾಸ್ತ: ಸಂಜೆ 5:40.
ತಾ.16-11-2021 ರ ಮಂಗಳವಾರದ ರಾಶಿಭವಿಷ್ಯ
ಮೇಷ: ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವದು. ಶಾಂತಿ,ನೆಮ್ಮದಿಯುಕ್ತ ಜೀವನ ಇರುವದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವದರಿಂದ ಗುರಿ ಮುಟ್ಟುವದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವದು. ಶುಭ ಸಂಖ್ಯೆ: 9
ವೃಷಭ: ವಾಸಸ್ಥಾನ,ಉದ್ಯೋಗಸ್ಥಾನ ಬದಲಾವಣೆಯ ಯೋಗವಿದೆ.ಕೌಟುಂಬಿಕ ಸಮಸ್ಯೆಗಳು ದೂರಾಗುವವು. ವ್ಯವಹಾರಿಕ ಸೂಕ್ಷ್ಮತೆಯಿಂದ ಹಾನಿ ತಪ್ಪಿಸಿರಿ. ವೃಥಾಚಿಂತೆ ಇರುವದು. ಹೊಸ ವ್ಯವಹಾರಗಳು ಬೇಡ. ಶುಭ ಸಂಖ್ಯೆ: 1
ಮಿಥುನ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ.ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವದು. ಶುಭ ಸಂಖ್ಯೆ: 6
ಕರ್ಕ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 8
ಸಿಂಹ: ಅಭದ್ರತೆ ಕಾಡುವ ಸಂಭವವಿದೆ.ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ.ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವದು. ಶುಭ ಸಂಖ್ಯೆ: 3
ಕನ್ಯಾ: ಬದಲಾವಣೆಯನ್ನು ಸಹಜವಾಗಿ ಸ್ವೀಕರಿಸಿ. ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸುವಿರಿ. ಸಾಮಜಿಕ ಗೌರವಗಳು ಅರಸಿಕೊಂಡು ಬರಲಿವೆ. ಮಾಲೀಕತ್ವದ ಆಸ್ತಿ ಕೈತಪ್ಪದಂತೆ ಎಚ್ಚರಿಕೆ ವಹಿಸಿರಿ. ಧನದ ಅಪವ್ಯಯ ಆಗದಂತೆ ನೋಡಿರಿ. ಶುಭ ಸಂಖ್ಯೆ: 7
ತುಲಾ: ನಿಶ್ಚಿತ ಆರ್ಥಿಕ ಸ್ಥಿತಿ ಇರುವದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 5
ವೃಶ್ಚಿಕ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 2
ಧನು: ತಪ್ಪುಗಳನ್ನು ಸಮರ್ಥಿಸುವದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 6
ಮಕರ: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 4
ಕುಂಭ: ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ. ಶುಭ ಸಂಖ್ಯೆ: 8
ಮೀನ: ಆಗುವುದೆಲ್ಲ ಒಳಿತೆಂಬ ಭಾವನೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ. ಮಹಿಳೆಯರಿಗೆ ಮನೆಯಲ್ಲಿನ ಆಂತರಿಕ ವಿರಸ ನೀಗಿ ಸೌಹಾರ್ದತೆ. ನೂತನ ವಿವಾದ ಹುಟ್ಟುಹಾಕದ ಹಾಗೆ ತಾಳ್ಮೆಯಡಿ ವರ್ತನೆ. ಶುಭ ಸಂಖ್ಯೆ: 3