ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಶುಕ್ಲಪಕ್ಷ, ತ್ರಯೋದಶಿ ತಿಥಿ, ಬುಧವಾರ, ನವೆಂಬರ್ 17, 2021. ಅಶ್ವಿನಿ ನಕ್ಷತ್ರ, ರಾಹುಕಾಲ: ಇಂದು ಬೆಳಗ್ಗೆ 12 ಗಂಟೆ 00 ನಿಮಿಷದಿಂದ ಮಧ್ಯಾಹ್ನ 1 ಗಂಟೆ 24 ನಿಮಿಷದವರೆಗೆ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6:21 ನಿಮಿಷ. ಸೂರ್ಯಾಸ್ತ: ಸಂಜೆ 5:39.
ತಾ.17-11-2021 ರ ಬುಧವಾರದ ರಾಶಿಭವಿಷ್ಯ
ಮೇಷ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭಸಂಖ್ಯೆ: 6
ವೃಷಭ: ಎಲ್ಲವನ್ನು ಹಗುರವಾಗಿ ಕಾಣುವದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭಸಂಖ್ಯೆ: 9
ಮಿಥುನ: ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವವು. ಸಂಭಂಧಿಗಳಿಂದ ಸಹಕಾರ ದೊರೆಯುವದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ. ಶುಭಸಂಖ್ಯೆ: 2
ಕರ್ಕ: ಸಾಲಗಾರರ ತೊಂದರೆ ಇರುವದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ. ಶುಭಸಂಖ್ಯೆ: 5
ಸಿಂಹ: ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು.ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು. ಶುಭಸಂಖ್ಯೆ: 7
ಕನ್ಯಾ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವದು. ಶುಭಸಂಖ್ಯೆ: 3
ತುಲಾ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ. ಶುಭಸಂಖ್ಯೆ: 8
ವೃಶ್ಚಿಕ: ವ್ಯವಹಾರದಲ್ಲಿ ಹಾನಿ ಕಂಡುಬರುವದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವದು. ಶುಭಸಂಖ್ಯೆ: 1
ಧನು: ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯುವದು. ಕೋರ್ಟನಲ್ಲಿ ಇರುವ ನ್ಯಾಯ ಬಗೆಹರಿಯುವದು. ಆರ್ಥಿಕ ಸುಧಾರಣೆ ಕಂಡುಬರುವದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವದು. ಶುಭಸಂಖ್ಯೆ: 9
ಮಕರ: ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ. ಶುಭಸಂಖ್ಯೆ: 4
ಕುಂಭ: ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವದು. ಸಹೋದರ ಸಹಕಾರ ತೋರುವದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವದು. ಮನೆಯಲ್ಲಿ ಸಂತಸದ ವಾತಾವರಣ ಇರುವದು. ಶುಭಸಂಖ್ಯೆ: 2
ಮೀನ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವದು. ಸಮತೋಲಿತ ಜೀವನವಿರುವದು. ಶುಭಸಂಖ್ಯೆ: 5