Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು

| Updated By: Vinay Bhat

Updated on: Nov 19, 2021 | 6:33 AM

Horoscope ನವೆಂಬರ್ 19, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಶುಕ್ಲಪಕ್ಷ, ಹುಣ್ಣಿಮೆ ತಿಥಿ, ಶುಕ್ರವಾರ, ನವೆಂಬರ್ 19, 2021. ಕೃತ್ತಿಕೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.35 ರಿಂದ ಇಂದು ಬೆಳಿಗ್ಗೆ 11.59 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.22. ಸೂರ್ಯಾಸ್ತ: ಸಂಜೆ 5.39

ತಾ.19-11-2021 ರ ಶುಕ್ರವಾರದ ರಾಶಿಭವಿಷ್ಯ.

ಮೇಷ: ಆಕಸ್ಮಿಕ ಧನಲಾಭವಾಗುವುದು. ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 6

ವೃಷಭ: ತೋರ್ಪಡಿಕೆ ಬೇಡ. ಧನಮದಕ್ಕಿಂತ ವಿದ್ಯಾಮದ ಅಪಾಯಕಾರಿ ಆದರಿಂದ ತೊಂದರೆ ಆಗುವ ಸಾಧ್ಯತೆ ಇದೆ. ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 9

ಮಿಥುನ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 5

ಕಟಕ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು. ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ. ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು. ಶುಭ ಸಂಖ್ಯೆ: 1

ಸಿಂಹ: ಮಾತಿನಂತೆಯೇ ಎಲ್ಲವೂ ನಡೆಯುವುದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವುದು. ಲಾಭದಾಯಕ ಹುದ್ದೆ ದೊರೆಯುವುದು. ಶುಭ ಸಂಖ್ಯೆ: 3

ಕನ್ಯಾ: ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕಠಿಣ ಪರಿಸ್ಥಿತಿಯಲ್ಲಿಯೂ ದುರ್ಲಭ ಸಾಧನೆ ಮಾಡುವಿರಿ. ಪರಿವಾರದಲ್ಲಿ ಸಂತಸವಿರುವುದು. ಕೇಡುಬಯಸುವ ಜನರಿಗೆ ಅಂಜದೇ ಮುಂದುವರೆಯಿರಿ. ಶುಭ ಸಂಖ್ಯೆ: 7

ತುಲಾ: ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ. ಶುಭ ಸಂಖ್ಯೆ: 6

ವೃಶ್ಚಿಕ: ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಿಕ ಸಂಕಷ್ಟಗಳು ಎದುರಾಗುವವು. ಶುಭ ಸಂಖ್ಯೆ: 2

ಧನು: ಅನಾವಶ್ಯಕ ತಿರುಗಾಟದಿಂದ ಆಲಸ್ಯ. ದುರ್ಜನರ ಸಹವಾಸ ದೋಷ ಕಂಡುಬರುವುದು. ಐಷಾರಾಮಿ ವಸ್ತುಗಳ ಖರೀದಿ ಸಂಭವ. ವ್ಯಾಪಾರ-ಉದ್ಯಮಗಳಲ್ಲಿ ತೃಪ್ತಿದಾಯಕ ಲಾಭವಿರುವುದು. ವಿದ್ಯಾರ್ಥಿಗಳಿಗೆ ಹಿನ್ನಡೆ ಇರುವುದು. ಶುಭ ಸಂಖ್ಯೆ: 6

ಮಕರ: ಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅಪೂರ್ಣ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಮೋಸಮಾಡುವ ಸಂಭವವಿದೆ. ದೂರ ಪ್ರಯಾಣ ಅಥವಾ ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 9

ಕುಂಭ: ಅನಿರೀಕ್ಷಿತ ಸಂಚಾರ ಒದಗಿಬಂದರೂ ತೃಪ್ತಿದಾಯಕವೆನ್ನಬಹುದು. ವ್ಯಾಪಾರಾದಿ ಉದ್ಯಮಗಳಲ್ಲಿ ಅಪೇಕಿಸಿದಂತೆ ಪ್ರಗತಿ. ಲಾಭ ತೋರಿಬರುತ್ತದೆ. ಹೊಸದಾದ ಆಲೋಚನಾ ಸಿದ್ಧಿ. ವಿಪರೀತ ಖರ್ಚು. ಶುಭ ಸಂಖ್ಯೆ: 4

ಮೀನ: ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವವು. ಈ ಸಮಯದಲ್ಲಿ ಉತ್ತಮ ಧನಾರ್ಜನೆ ಯಾಗುವುದು ವಿದೇಶಪ್ರಯಾಣ, ಪ್ರೇಮಸಂಭಾಷಣೆ, ದೇವ ಬ್ರ್ರಾಹ್ಮಣ,ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವವು. ಶುಭ ಸಂಖ್ಯೆ: 1

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937