Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ

| Updated By: ಆಯೇಷಾ ಬಾನು

Updated on: Nov 21, 2021 | 7:08 AM

Horoscope ನವೆಂಬರ್ 21, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಕೃಷ್ಣಪಕ್ಷ, ಬಿದಿಗೆ ತಿಥಿ, ಭಾನುವಾರ, ನವೆಂಬರ್ 21, 2021. ರೋಹಿಣಿ ನಕ್ಷತ್ರ, ರಾಹುಕಾಲ: ಇಂದು ಸಂಜೆ 4.14 ರಿಂದ ಇಂದು ಸಂಜೆ 5.38 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.24. ಸೂರ್ಯಾಸ್ತ: ಸಂಜೆ 5.39

ತಾ.21-11-2021 ರ ಭಾನುವಾರದ ರಾಶಿಭವಿಷ್ಯ.

ಮೇಷ: ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವುದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 9

ವೃಷಭ: ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 1

ಮಿಥುನ: ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 2

ಕಟಕ: ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವುದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ. ದೂರಪ್ರಯಾಣ ಯೋಗವಿದೆ. ಶುಭ ಸಂಖ್ಯೆ: 6

ಸಿಂಹ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವುದು. ಶುಭ ಸಂಖ್ಯೆ: 3

ಕನ್ಯಾ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 8

ತುಲಾ: ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವವು. ಸಂಭಂಧಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 4

ವೃಶ್ಚಿಕ: ವಿನಯಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವುದು. ಶುಭ ಸಂಖ್ಯೆ: 7

ಧನು: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂತ ಅಧಿಕ ಖರ್ಚು ಇರುವುದು. ಶುಭ ಸಂಖ್ಯೆ: 9

ಮಕರ: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 3

ಕುಂಭ: ದೂರ ಪ್ರಯಾಣದ ಅವಶ್ಯಕತೆ ಕಂಡುಬರುವುದು. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ಅನೇಕ ರೀತಿಯ ಸೌಭಾಗ್ಯಗಳು ದೊರೆಯುವವು. ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ಮಶಿನರಿಗಳಿಂದ ತೊಂದರೆ ಸಾಧ್ಯತೆ. ಶುಭ ಸಂಖ್ಯೆ: 5

ಮೀನ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು. ಶುಭ ಸಂಖ್ಯೆ: 7

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937