Horoscope Today- ದಿನ ಭವಿಷ್ಯ; ಮೇಷ ರಾಶಿಯವರಿಗೆ ಮದುವೆಯ ಮಾತುಕತೆಗಳಲ್ಲಿ ಸಫಲತೆ ಸಿಗಲಿದೆ

Horoscope ನವೆಂಬರ್ 22, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಮೇಷ ರಾಶಿಯವರಿಗೆ ಮದುವೆಯ ಮಾತುಕತೆಗಳಲ್ಲಿ ಸಫಲತೆ ಸಿಗಲಿದೆ
ದಿನ ಭವಿಷ್ಯ
Follow us
TV9 Web
| Updated By: ಆಯೇಷಾ ಬಾನು

Updated on: Nov 22, 2021 | 6:37 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಕೃಷ್ಣಪಕ್ಷ, ತದಿಗೆ ತಿಥಿ, ಸೋಮವಾರ, ನವೆಂಬರ್ 22, 2021. ಮೃಗಶಿರ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.48 ರಿಂದ ಇಂದು ಬೆಳಿಗ್ಗೆ 9.12 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.24. ಸೂರ್ಯಾಸ್ತ: ಸಂಜೆ 5.39

ತಾ.22-11-2021 ರ ಸೋಮವಾರದ ರಾಶಿಭವಿಷ್ಯ.

ಮೇಷ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 9

ವೃಷಭ: ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ. ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ. ಶುಭ ಸಂಖ್ಯೆ: 1

ಮಿಥುನ: ಅಗೌರವ ಆಗುವ ಸಂಭವ ಇರುವುದರಿಂದ ಸೂಕ್ಷ್ಮವಾಗಿರುವುದು ಉತ್ತಮ. ಅನಪೇಕ್ಷಿತರಿಗೆ ಉಪಕಾರ ಮಾಡುವುದು ಸರಿಯಲ್ಲ. ಮಕ್ಕಳ ಚಿಂತೆ ಇರುವುದು. ವಧುವರರಿಗೆ ಮದುವೆಯ ಯೋಗ ಕೂಡಿಬರುವುದು. ಶುಭ ಸಂಖ್ಯೆ: 4

ಕಟಕ: ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಅನಿವಾರ್ಯ ಕೆಲಸಗಳಗೆ ಅಲೆದಾಟ ಕಂಡುಬರುವುದು. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 7

ಸಿಂಹ: ಸಾಲಗಾರರ ತೊಂದರೆ ಇರುವುದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವುದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ. ಶುಭ ಸಂಖ್ಯೆ: 6

ಕನ್ಯಾ: ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವುದು. ಜವಾಬ್ದಾರಿಗಳ ಹಂಚಿಕೆ ಮಾಡುವ ಪ್ರಮೇಯ ಉಂಟಾಗುವುದು. ಮಿತಿ ಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಆರ್ಥಿಕ ಲಾಭ ಇಲ್ಲದಿದ್ದರೂ ಹಾನಿ ಇರುವುದಿಲ್ಲ. ಶುಭ ಸಂಖ್ಯೆ: 2

ತುಲಾ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು. ಶುಭ ಸಂಖ್ಯೆ: 8

ವೃಶ್ಚಿಕ: ಅನವಶ್ಯಕ ಅಲೆದಾಟದ ಸಾಧ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಶುಭ ಸಂಖ್ಯೆ: 3

ಧನು: ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು. ಶುಭ ಸಂಖ್ಯೆ: 7

ಮಕರ: ಸ್ವಜನರಲ್ಲಿ ಮನಸ್ತಾಪ. ದೇಹಾರೋಗ್ಯವೂ ಸರಿಯಿರದೆ ತಾಪದಾಯಕವಾಗುತ್ತದೆ. ಆದರೆ ಶ್ರೇಷ್ಠ ಜನರಿಂದ ಪುರಸ್ಕಾರ. ಸಾಂಸಾರಿಕ ದೃಷ್ಟಿಯಲ್ಲೂ ತೃಪ್ತಿದಾಯಕವಿದ್ದು ನೆಮ್ಮದಿ ಉಂಟಾಗುತ್ತದೆ. ಶುಭ ಸಂಖ್ಯೆ: 5

ಕುಂಭ: ಅಲ್ಪ ತೃಪ್ತಿ, ವ್ಯಾಪಾರದಲ್ಲಿ ನಿರಾಸಕ್ತಿ, ಅಪೇಕ್ಷಿತ ಕೆಲಸಗಳು ನೆರವೇರುವವು, ಧನಲಾಭ, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಹಿರಿಯರಿಗೆ ಕೀರ್ತಿದಾಯಕ. ಆಲಸ್ಯದಿಂದ ತೊಂದರೆ ಇರುವುದು ಗುರುಸ್ತೋತ್ರ ಪಾರಾಯಣ ಮಾಡಿರಿ. ಶುಭ ಸಂಖ್ಯೆ: 9

ಮೀನ: ನಿಧಾನವಾಗಿ ಕಾರ್ಯಸಿದ್ಧಿಯಾಗುವುದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವುದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವುದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ