Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಎದುರಾಗಲಿದೆ ಕೌಟುಂಬಿಕ ಸಮಸ್ಯೆಗಳು
Horoscope ನವೆಂಬರ್ 23, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ. ರಾಹುಕಾಲ: ಇಂದು ಮಧ್ಯಾಹ್ನ 2.50 ರಿಂದ ಇಂದು ಸಂಜೆ 4.14 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.25. ಸೂರ್ಯಾಸ್ತ: ಸಂಜೆ 5.39
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಕೃಷ್ಣಪಕ್ಷ, ಚೌತಿ ತಿಥಿ, ಮಂಗಳವಾರ, ನವೆಂಬರ್ 23, 2021. ಆರ್ದ್ರೆ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 2.50 ರಿಂದ ಇಂದು ಸಂಜೆ 4.14 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.25. ಸೂರ್ಯಾಸ್ತ: ಸಂಜೆ 5.39
ತಾ.23-11-2021 ರ ಮಂಗಳವಾರದ ರಾಶಿಭವಿಷ್ಯ.
ಮೇಷ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 9
ವೃಷಭ: ಉದ್ಯೋಗ ಪ್ರಾಪ್ತಿ, ಉದ್ಯಮದಲ್ಲಿ ಪ್ರಗತಿ ಇರುವುದು. ಹಳೆಯ ಸಾಲ ತೀರುವುದು. ಅನೇಕ ಮೂಲಗಳಿಂದ ಧನಪ್ರಾಪ್ತಿಯ ಯೋಗವಿದೆ. ಬಂಧುವರ್ಗದಲ್ಲಿಯ ಅಸಮಾಧಾನಗಳು ಪರಿಹಾರವಾಗುವವು. ಶುಭ ಸಂಖ್ಯೆ: 1
ಮಿಥುನ: ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಶುಭ ಸಂಖ್ಯೆ: 5
ಕಟಕ: ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು. ಶುಭ ಸಂಖ್ಯೆ: 3
ಸಿಂಹ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 7
ಕನ್ಯಾ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 4
ತುಲಾ: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು. ಶುಭ ಸಂಖ್ಯೆ: 4
ವೃಶ್ಚಿಕ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 2
ಧನು: ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 1
ಮಕರ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 9
ಕುಂಭ: ಹಿರಿಯರ ಮಾರ್ಗದರ್ಶನ ದೊರೆಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವುದು. ಶುಭ ಸಂಖ್ಯೆ: 6
ಮೀನ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ. ಶುಭ ಸಂಖ್ಯೆ: 3