Horoscope Today- ದಿನ ಭವಿಷ್ಯ; ಕನ್ಯಾ ರಾಶಿಯವರಿಗೆ ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ
Horoscope ನವೆಂಬರ್ 24, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಕೃಷ್ಣಪಕ್ಷ, ಪಂಚಮಿ ತಿಥಿ, ಬುಧವಾರ, ನವೆಂಬರ್ 24, 2021. ಪುನರ್ವಸು ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.01 ರಿಂದ ಇಂದು ಮಧ್ಯಾಹ್ನ 1.25 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.25. ಸೂರ್ಯಾಸ್ತ: ಸಂಜೆ 5.39
ತಾ.24-11-2021 ರ ಬುಧವಾರದ ರಾಶಿಭವಿಷ್ಯ.
ಮೇಷ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 5
ವೃಷಭ: ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ. ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ. ಶುಭ ಸಂಖ್ಯೆ: 6
ಮಿಥುನ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವುದು. ಶುಭ ಸಂಖ್ಯೆ: 1
ಕಟಕ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು. ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ. ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು. ಶುಭ ಸಂಖ್ಯೆ: 9
ಸಿಂಹ: ಮಾತಿನಂತೆಯೇ ಎಲ್ಲವೂ ನಡೆಯುವುದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವುದು. ಲಾಭದಾಯಕ ಹುದ್ದೆ ದೊರೆಯುವುದು. ಶುಭ ಸಂಖ್ಯೆ: 8
ಕನ್ಯಾ: ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ. ಸಾಧನೆಗೆ ಸೂಕ್ತ ಅವಕಾಶ ದೊರೆಯುವುದು. ಹಣಕಾಸಿನ ತೊಂದರೆಗಳು ಪರಿಹಾರವಾಗುವವು. ವ್ಯವಹಾರಗಳಲ್ಲಿ ಗೌಪ್ಯತೆ ಇರಲಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 3
ತುಲಾ: ಪೂರ್ವತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವುದು. ಮೇಲಧಿಕಾರಿಗಳ ಒತ್ತಡ ಬೇಸರ ತರುವುದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವುದು. ಶ್ರಮಕ್ಕೆ ತಕ್ಕ ಲಾಭ ದೊರೆಯುವುದು. ಶುಭ ಸಂಖ್ಯೆ: 7
ವೃಶ್ಚಿಕ: ಬದಲಾವಣೆಯನ್ನು ಸಹಜವಾಗಿ ಸ್ವೀಕರಿಸಿ. ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸುವಿರಿ. ಸಾಮಾಜಿಕ ಗೌರವಗಳು ಅರಸಿಕೊಂಡು ಬರಲಿವೆ. ಮಾಲೀಕತ್ವದ ಆಸ್ತಿ ಕೈತಪ್ಪದಂತೆ ಎಚ್ಚರಿಕೆ ವಹಿಸಿರಿ. ಧನದ ಅಪವ್ಯಯ ಆಗದಂತೆ ನೋಡಿರಿ. ಶುಭ ಸಂಖ್ಯೆ: 2
ಧನು: ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ್ಗ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭ ಸಂಖ್ಯೆ: 4
ಮಕರ: ಯಶಸ್ಸು. ಶ್ರಮಕ್ಕೆ ತಕ್ಕ ಲಾಭ, ಕೀರ್ತಿ, ಕೃಷಿಯಲ್ಲಿ ಉತ್ತಮ ಸಾಧನೆ, ಮನೆಯಲ್ಲಿ ಮಂಗಲಕಾರ್ಯ, ಬುಧ, ಮಂಗಳ ಯೋಗ ಶುಭದಾಯಕ ಆದರೂ ಕಿರಿಕಿರಿ ಸಂಭವ. ಪರಿಹಾರಕ್ಕಾಗಿ ಅನ್ನದಾನ ಮಾಡಿರಿ. ಶುಭ ಸಂಖ್ಯೆ: 8
ಕುಂಭ: ಆರಂಭದಲ್ಲಿ ಹರ್ಷ, ಉತ್ಸಾಹ ಇರುವುದು ಕೊನೆಗೆ ಮನೋವ್ಯಥೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವುದು. ಗ್ರಹೋಪಯೋಗಿ ವಸ್ತುಗಳ ಖರೀದಿ, ಮನೆ ರಿಪೇರಿ ಮೊದಲಾದ ಕೆಲಸಗಳಾಗುವವು. ಶ್ರೀಲಕ್ಷ್ಮೀಸ್ತೋತ್ರ ಪಠಿಸಿರಿ. ಶುಭ ಸಂಖ್ಯೆ: 2
ಮೀನ: ಹೊಸ ಯೋಜನೆಗಳು ಬೇಡ. ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವದು. ಕೊಟ್ಟ ಸಾಲ ಮರುಪಾವತಿ ಆಗಲಾರದು, ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಧ್ಯತೆ ಇದೆ. ಶುಭ ಸಂಖ್ಯೆ: 9