Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಅನಿರೀಕ್ಷಿತ ಧನ ನಷ್ಟ ಉಂಟಾಗಲಿದೆ
Horoscope ನವೆಂಬರ್ 25, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಕೃಷ್ಣಪಕ್ಷ, ಷಷ್ಠಿ ತಿಥಿ, ಗುರುವಾರ, ನವೆಂಬರ್ 25, 2021. ಪುಷ್ಯ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.26 ರಿಂದ ಇಂದು ಮಧ್ಯಾಹ್ನ 2.50 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.26. ಸೂರ್ಯಾಸ್ತ: ಸಂಜೆ 5.39
ತಾ.25-11-2021 ರ ಗುರುವಾರದ ರಾಶಿಭವಿಷ್ಯ.
ಮೇಷ: ವಿನಾಕಾರಣ ನಿಂದೆಯ ಸಂಭವವಿದೆ. ಖರ್ಚುಹೆಚ್ಚಾಗುವ ಯೋಗ ಇರುವುದರಿಂದ ಉಳಿತಾಯದ ಯೋಜನೆ ಮಾಡಿರಿ. ಮನೆಯಲ್ಲಿ ಶಾಂತಿಯುತ ನೆಮ್ಮದಿಯ ವಾತಾವರಣ ಇರುವುದು. ಶುಭ ಸಂಖ್ಯೆ: 5
ವೃಷಭ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು. ಶುಭ ಸಂಖ್ಯೆ: 9
ಮಿಥುನ: ಉದ್ಯೋಗ ಬದಲಿ ಮಾಡುವುದು ಸದ್ಯ ಬೇಡ. ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವುದು. ಶುಭ ಸಂಖ್ಯೆ: 1
ಕಟಕ: ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ. ಶುಭ ಸಂಖ್ಯೆ: 8
ಸಿಂಹ: ಮನಸ್ಸಿನಂತೆಯೇ ಎಲ್ಲ ಕೆಲಸಗಳೂ ಪೂರ್ಣವಾಗುವವು. ಉದ್ಯೋಗಸ್ಥಾನದಲ್ಲಿ ಕಾರ್ಯಭಾರ ಹೆಚ್ಚುವುದು. ಆಸ್ತಿ ಸಂಬಂಧಿತ ವಿಷಯದಲ್ಲಿ ವಂಚನೆಯಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತೋಷದ ಕಾರ್ಯಗಳು ನೆರವೇರುವವು. ಶುಭ ಸಂಖ್ಯೆ: 2
ಕನ್ಯಾ: ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ಮನೋಚಿಂತಿತ ಕಾರ್ಯ ಕೈಗೂಡುವುದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ. ಶುಭ ಸಂಖ್ಯೆ: 7
ತುಲಾ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 2
ವೃಶ್ಚಿಕ: ತಪ್ಪುಗಳನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 3
ಧನು: ತಾಪತ್ರಯಗಳೆಲ್ಲ ದೂರವಾಗಿದ್ದು ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತದೆ. ವ್ಯಾಪಾರಾದಿ ಉದ್ಯಮಗಳು ಇಷ್ಟದಂತೆ ನಡೆಯುತ್ತದೆ. ಕೆಲವೊಮ್ಮೆ ಸಣ್ಣ ವಿಷಯಗಳಿಗೂ ಭಯ ತೋರಿದರೂ ಹಾನಿಯಿಲ್ಲ. ಶುಭ ಸಂಖ್ಯೆ: 5
ಮಕರ: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 6
ಕುಂಭ: ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ವಾದ-ವಿವಾದ, ಹಠಸಾಧನೆ ಬೇಡ. ಶುಭ ಸಂಖ್ಯೆ: 9
ಮೀನ: ಹಣಕಾಸಿನ ವ್ಯವಹಾರದಲ್ಲಿ ಧ್ಯರ್ಯದಿಂದ ಕಾರ್ಯ ಸಾಧನೆ. ಅಪೇಕ್ಷಸದ ಲಾಭ ಸಂಭವ. ಗಡಿಬಿಡಿಯ ವಾತಾವತರಣ, ಬಿಡುವಿಲ್ಲದ ಕಾರ್ಯ, ಮಿತ್ರರೊಂದಿಗೆ ಜಟಾಪಟಿ ಸಂಭವ, ದೀಪದಾನ ಮಾಡಿರಿ. ಶುಭ ಸಂಖ್ಯೆ: 4