Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಕೃಷ್ಣಪಕ್ಷ, ಅಷ್ಟಮಿ ತಿಥಿ, ಭಾನುವಾರ, ನವೆಂಬರ್ 28, 2021 ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯವರಿಗೆ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ
ದಿನ ಭವಿಷ್ಯ
Follow us
TV9 Web
| Updated By: ಆಯೇಷಾ ಬಾನು

Updated on: Nov 28, 2021 | 6:37 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಕೃಷ್ಣಪಕ್ಷ, ಅಷ್ಟಮಿ ತಿಥಿ, ಭಾನುವಾರ, ನವೆಂಬರ್ 28, 2021. ಪುಬ್ಬೆ ನಕ್ಷತ್ರ, ರಾಹುಕಾಲ: ಇಂದು ಸಂಜೆ 4:15 ರಿಂದ ಇಂದು ಸಂಜೆ 5:38 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.28. ಸೂರ್ಯಾಸ್ತ: ಸಂಜೆ 5.39

ತಾ.28-11-2021 ರ ಭಾನುವಾರದ ರಾಶಿಭವಿಷ್ಯ.

ಮೇಷ: ಆರ್ಥಿಕ ಸ್ಥಿತಿ ಸುಧಾರಿಸುವದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 5

ವೃಷಭ: ಆಸ್ತಿ ವಿಷಯಕ್ಕೆ ಸಂಬಂಧಿಸಿಂತೆ ತೊಂದರೆಯಾಗುವ ಸಂಭವವಿದೆ. ಆದಾಯ ಉತ್ತಮವಾಗಿರುವದು.ನೌಕರಿಯಲ್ಲಿ ಅಸಹಕಾರ ಎದುರಿಬೇಕಾಗುವದು. ಗ್ರಹಸೌಖ್ಯವಿದ್ದರೂ ಮಾನಸಿಕ ನೆಮ್ಮದಿ ಇರಲಾರದು. ಶುಭ ಸಂಖ್ಯೆ: 9

ಮಿಥುನ: ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಸಹೋದರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ.ಪರಸ್ಪರ ದೋಷಾರೋಪ ಬೇಡ.ಮಿತ್ರರ ಸಹಾಯ ದೊರೆಯುವದು. ಶುಭ ಸಂಖ್ಯೆ: 2

ಕರ್ಕ: ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 4

ಸಿಂಹ: ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವದು. ಆರ್ಥಿಕ ಅಭಿವೃದ್ಧಿ ಕಂಡುಬರುವದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವದು. ಶತೃಗಳೂ ಸೌಮ್ಯರಾಗುವ ಕಾಲ ಇರುವದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ. ಶುಭ ಸಂಖ್ಯೆ: 8

ಕನ್ಯಾ: ಪ್ರೀತಿವಿಶ್ವಾಸದ ಬಲದಿಂದ ಅಧಿಕಾರಿಗಳ ಗಮನ ಸೆಳೆಯುವಿರಿ. ಅತಿಯಾದ ಮೃದು ಧೋರಣೆ ದುರುಪಯೋಗವಾಗದಂತೆ ನೋಡಿಕೊಳ್ಳಿರಿ. ಮಂಗಲಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಇರುವದು. ಶುಭ ಸಂಖ್ಯೆ: 6

ತುಲಾ: ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ. ಶುಭ ಸಂಖ್ಯೆ: 7

ವೃಶ್ಚಿಕ: ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವದು ಅಮಾಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವದು. ಕೈಗೊಂಡ ಕಾರ್ಯ ಯಶ ಕಾಣುವದು. ಶುಭ ಸಂಖ್ಯೆ: 3

ಧನು: ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವದು. ಶುಭ ಸಂಖ್ಯೆ: 6

ಮಕರ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 2

ಕುಂಭ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವದು. ಶುಭ ಸಂಖ್ಯೆ: 4

ಮೀನ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ . ಶುಭ ಸಂಖ್ಯೆ:  9

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937