Horoscope Today- ದಿನ ಭವಿಷ್ಯ; ಈ ರಾಶಿಯವರು ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವರು
Horoscope ನವೆಂಬರ್ 29, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.
ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಕೃಷ್ಣಪಕ್ಷ, ನವಮಿ ತಿಥಿ, ಸೋಮವಾರ, ನವೆಂಬರ್ 29, 2021. ಉತ್ತರೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.51 ರಿಂದ ಇಂದು ಬೆಳಿಗ್ಗೆ 9.14 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.28. ಸೂರ್ಯಾಸ್ತ: ಸಂಜೆ 5.39
ತಾ.29-11-2021 ರ ಸೋಮವಾರದ, ರಾಶಿಭವಿಷ್ಯ.
ಮೇಷ: ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ. ವೈವಾಹಿಕ ಚಿಂತೆ ಇರುವುದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ದರ್ಶನ ಯೋಗವಿದೆ. ಶುಭ ಸಂಖ್ಯೆ: 9
ವೃಷಭ: ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಶುಭ ಸಂಖ್ಯೆ: 1
ಮಿಥುನ: ಕೆಲಸಗಳು ನಿಧಾನಗತಿಯಲ್ಲಿ ಸಾಗುವವು ಸೂಕ್ಷ್ಮತೆಯಿಂದ ವ್ಯವಹರಿಸಿರಿ. ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ಮನೋಚಿಂತಿತ ಕಾರ್ಯ ಕೈಗೂಡುವುದು. ಹಳೆಯ ಸಾಲ ತೀರುವುದು. ಶುಭ ಸಂಖ್ಯೆ: 5
ಕಟಕ: ದೂರಾಲೋಚನೆ ಮಾಡಿ ಕಾರ್ಯ ನಿರ್ವಹಿಸಿರಿ. ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವುದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ನೆಮ್ಮದಿಯ ಜೀವನ ಇರುವದು. ಉದ್ಯೋಗವನ್ನು ವಿಸ್ತರಿಸುವ ಕಾಲ ಇರುವುದು. ಶುಭ ಸಂಖ್ಯೆ: 8
ಸಿಂಹ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 3
ಕನ್ಯಾ: ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 7
ತುಲಾ: ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 4
ವೃಶ್ಚಿಕ: ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಶುಭ ಸಂಖ್ಯೆ: 6
ಧನು: ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿಯು ಉತ್ತಮ ಫಲಕೊಡುವುದು. ಹಳೆಯ ಬಾಕಿ ವಸೂಲಾಗುವುದು. ವ್ಯಾಜ್ಯಗಳು ಅಂತ್ಯಕಾಣುವವು. ಗ್ರಹ ಸೌಖ್ಯವಿರುವುದು. ಶುಭ ಸಂಖ್ಯೆ: 7
ಮಕರ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 9
ಕುಂಭ: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 4
ಮೀನ: ಆರಂಭದಲ್ಲಿ ಹರ್ಷ, ಉತ್ಸಾಹ ಇರುವದು ಕೊನೆಗೆ ಮನೋವ್ಯಥೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವುದು. ಗ್ರಹೋಪಯೋಗಿ ವಸ್ತುಗಳ ಖರೀದಿ, ಮನೆ ರಿಪೇರಿ ಮೊದಲಾದ ಕೆಲಸಗಳಾಗುವವು. ಶ್ರೀಲಕ್ಷ್ಮೀಸ್ತೋತ್ರ ಪಠಿಸಿರಿ. ಶುಭ ಸಂಖ್ಯೆ: 3