Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು

Horoscope ನವೆಂಬರ್ 30, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು
ದಿನ ಭವಿಷ್ಯ

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಕೃಷ್ಣಪಕ್ಷ, ಏಕಾದಶಿ ತಿಥಿ, ಮಂಗಳವಾರ, ನವೆಂಬರ್ 30, 2021. ಹಸ್ತ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 2.51 ರಿಂದ ಇಂದು ಸಂಜೆ 4.14 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.29. ಸೂರ್ಯಾಸ್ತ: ಸಂಜೆ 5.39

ತಾ.30-11-2021 ರ ಮಂಗಳವಾರದ ರಾಶಿಭವಿಷ್ಯ

ಮೇಷ: ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು. ಕೋರ್ಟ್ನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು. ಶುಭ ಸಂಖ್ಯೆ: 1

ವೃಷಭ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 5

ಮಿಥುನ: ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವುದು. ಮಾನಸಿಕ ಉತ್ಸಾಹ ಕಂಡುಬರುವುದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವುದು. ಕಾರಣಾಂತರ ಅಧಿಕ ಖರ್ಚುಬರಬಹುದು. ಶುಭ ಸಂಖ್ಯೆ: 9

ಕಟಕ: ಅಭದ್ರತೆ ಕಾಡುವ ಸಂಭವವಿದೆ. ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ. ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವುದು. ಶುಭ ಸಂಖ್ಯೆ: 5

ಸಿಂಹ: ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವುದು. ಆರ್ಥಿಕ ಅಭಿವೃದ್ಧಿ ಕಂಡುಬರುವುದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವುದು. ಶತೃಗಳೂ ಸೌಮ್ಯರಾಗುವ ಕಾಲ ಇರುವುದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ. ಶುಭ ಸಂಖ್ಯೆ: 8

ಕನ್ಯಾ: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವುದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವದು. ಶುಭ ಸಂಖ್ಯೆ: 3

ತುಲಾ: ಸಹನೆಗೆ ತಕ್ಕ ಫಲ ದೊರೆಯುವುದು. ಬಹು ದಿನದ ಕನಸು ನನಸಾಗುವ ಕಾಲವಿದೆ. ಕೊರ್ಟಿನಲ್ಲಿದ್ದ ವ್ಯಾಜ್ಯಗಳಲ್ಲಿ ಜಯ ದೊರೆಯುವುದು. ಸಂತಾನಫಲದ ಅಪೇಕ್ಷೆ ಈಡೇರುವುದು. ಆರ್ಥಿಕ ವ್ಯವಹಾರಗಳ ಅದೃಷ್ಟ ಲಾಭತರುವವು. ಶುಭ ಸಂಖ್ಯೆ: 6

ವೃಶ್ಚಿಕ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 7

ಧನು: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 4

ಮಕರ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ: 2

ಕುಂಭ: ಹೊಸ ಯೋಜನೆಗಳು ಬೇಡ. ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವುದು. ಕೊಟ್ಟ ಸಾಲ ಮರುಪಾವತಿ ಆಗಲಾರದು, ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಧ್ಯತೆ ಇದೆ. ಶುಭ ಸಂಖ್ಯೆ: 1

ಮೀನ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 9

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

Click on your DTH Provider to Add TV9 Kannada