AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ; ಈ ಶನಿವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು, ಯಾರಿಗೆ ಕೆಡುಕು?

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಶುಕ್ಲಪಕ್ಷ ಪಕ್ಷ, ಬಿದಿಗೆ ತಿಥಿ, ಶನಿವಾರ, ನವಂಬರ್​ 6, 2021 ಭವಿಷ್ಯ.

Horoscope Today - ದಿನ ಭವಿಷ್ಯ; ಈ ಶನಿವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು, ಯಾರಿಗೆ ಕೆಡುಕು?
ದಿನ ಭವಿಷ್ಯ
TV9 Web
| Edited By: |

Updated on: Nov 06, 2021 | 6:42 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಶುಕ್ಲಪಕ್ಷ ಪಕ್ಷ, ಬಿದಿಗೆ ತಿಥಿ, ಶನಿವಾರ, ನವಂಬರ್​ 6, 2021. ಅನೂರಾಧ  ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9:7 ರಿಂದ ಇಂದು ಬೆಳಿಗ್ಗೆ 10:32 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.16. ಸೂರ್ಯಾಸ್ತ: ಸಂಜೆ 5.42

ತಾ.06-11-2021 ರ ಶನಿವಾರದ ರಾಶಿಭವಿಷ್ಯ. ಮೇಷ: ಆರ್ಥಿಕ ಸ್ಥಿತಿ ಸುಧಾರಿಸುವದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. 5

ವೃಷಭ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. 9

ಮಿಥುನ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವದು.ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ.ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು.ನ್ಯಾಯಾಲಯದಲ್ಲಿ ಜಯ ದೊರೆಯುವದು. ವಿದ್ಯೆಯಲ್ಲಿ ಸಾಧನೆ ಇರುವದು. 1

ಕರ್ಕ: ಮಾತಿನಂತೆಯೇ ಎಲ್ಲವೂ ನಡೆಯುವದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವದು.ಲಾಭದಾಯಕ ಹುದ್ದೆ ದೊರೆಯುವದು. 5

ಸಿಂಹ: ಪೂರ್ವತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವದು. ಮೇಲಧಿಕಾರಿಗಳ ಒತ್ತಡ ಬೇಸರ ತರುವದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವದು. ಶ್ರಮಕ್ಕೆ ತಕ್ಕ ಲಾಭ ದೊರೆಯುವದು. 3

ಕನ್ಯಾ: ಅನಿಸಿಕೆಗಿಂತ ವಾಸ್ತವ ಬೇರೆ ಇರುವದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವದು ಒಳ್ಳೆಯದು. ಧನಹಾನಿಯ ಸಂಭವವಿದೆ. 8

ತುಲಾ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಸಯೆಗಳು ಪರಿಹಾರವಾಗುವವು. 4

ವೃಶ್ಚಿಕ: ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. 2

ಧನು: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವದು. ವಿದೇಶ ಪ್ರಯಾಣದ ಯೋಗವಿದೆ. 6

ಮಕರ: ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು 9

ಕುಂಭ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. 1

ಮೀನ: ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವದು.ಕುಟುಂಬದ ಜವಾಬ್ದಾರಿ ಹೆಚ್ಚುವದು. ಮಕ್ಕಳ ವಿದ್ಯಾಬ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ. 5

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್