Horoscope Today – ದಿನ ಭವಿಷ್ಯ; ಈ ಶನಿವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು, ಯಾರಿಗೆ ಕೆಡುಕು?

| Updated By: Vinay Bhat

Updated on: Nov 06, 2021 | 6:42 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಶುಕ್ಲಪಕ್ಷ ಪಕ್ಷ, ಬಿದಿಗೆ ತಿಥಿ, ಶನಿವಾರ, ನವಂಬರ್​ 6, 2021 ಭವಿಷ್ಯ.

Horoscope Today - ದಿನ ಭವಿಷ್ಯ; ಈ ಶನಿವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು, ಯಾರಿಗೆ ಕೆಡುಕು?
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಶುಕ್ಲಪಕ್ಷ ಪಕ್ಷ, ಬಿದಿಗೆ ತಿಥಿ, ಶನಿವಾರ, ನವಂಬರ್​ 6, 2021. ಅನೂರಾಧ  ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9:7 ರಿಂದ ಇಂದು ಬೆಳಿಗ್ಗೆ 10:32 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.16. ಸೂರ್ಯಾಸ್ತ: ಸಂಜೆ 5.42

ತಾ.06-11-2021 ರ ಶನಿವಾರದ ರಾಶಿಭವಿಷ್ಯ.
ಮೇಷ: ಆರ್ಥಿಕ ಸ್ಥಿತಿ ಸುಧಾರಿಸುವದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ.
5

ವೃಷಭ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ.
9

ಮಿಥುನ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವದು.ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ.ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು.ನ್ಯಾಯಾಲಯದಲ್ಲಿ ಜಯ ದೊರೆಯುವದು. ವಿದ್ಯೆಯಲ್ಲಿ ಸಾಧನೆ ಇರುವದು.
1

ಕರ್ಕ: ಮಾತಿನಂತೆಯೇ ಎಲ್ಲವೂ ನಡೆಯುವದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವದು.ಲಾಭದಾಯಕ ಹುದ್ದೆ ದೊರೆಯುವದು.
5

ಸಿಂಹ: ಪೂರ್ವತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವದು. ಮೇಲಧಿಕಾರಿಗಳ ಒತ್ತಡ ಬೇಸರ ತರುವದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವದು. ಶ್ರಮಕ್ಕೆ ತಕ್ಕ ಲಾಭ ದೊರೆಯುವದು.
3

ಕನ್ಯಾ: ಅನಿಸಿಕೆಗಿಂತ ವಾಸ್ತವ ಬೇರೆ ಇರುವದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವದು ಒಳ್ಳೆಯದು. ಧನಹಾನಿಯ ಸಂಭವವಿದೆ.
8

ತುಲಾ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಸಯೆಗಳು ಪರಿಹಾರವಾಗುವವು.
4

ವೃಶ್ಚಿಕ: ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ.
2

ಧನು: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವದು. ವಿದೇಶ ಪ್ರಯಾಣದ ಯೋಗವಿದೆ.
6

ಮಕರ: ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು
9

ಕುಂಭ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ.
1

ಮೀನ: ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವದು.ಕುಟುಂಬದ ಜವಾಬ್ದಾರಿ ಹೆಚ್ಚುವದು. ಮಕ್ಕಳ ವಿದ್ಯಾಬ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ.
5

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937