Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ವಿವಿಧ ಮೂಲಗಳಿಂದ ಸಹಾಯ ದೊರೆಯುವುದು

| Updated By: Vinay Bhat

Updated on: Oct 01, 2021 | 6:38 AM

Horoscope ಅಕ್ಟೋಬರ್ 01, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ವಿವಿಧ ಮೂಲಗಳಿಂದ ಸಹಾಯ ದೊರೆಯುವುದು
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಕೃಷ್ಣಪಕ್ಷ, ದಶಮಿ ತಿಥಿ, ಶುಕ್ರವಾರ, ಅಕ್ಟೋಬರ್ 01, 2021. ಪುಷ್ಯ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.35 ರಿಂದ ಇಂದು ಬೆಳಿಗ್ಗೆ 12.04ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.06. ಸೂರ್ಯಾಸ್ತ: ಸಂಜೆ 6.05

ತಾ.01-10-2021 ರ ಶುಕ್ರವಾರದ ರಾಶಿಭವಿಷ್ಯ.

ಮೇಷ: ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ.ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ. ಶುಭ ಸಂಖ್ಯೆ: 9

ವೃಷಭ: ಮಾತಿನಂತೆಯೇ ಎಲ್ಲವೂ ನಡೆಯುವದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವುದು. ಲಾಭದಾಯಕ ಹುದ್ದೆ ದೊರೆಯುವುದು. ಶುಭ ಸಂಖ್ಯೆ: 3

ಮಿಥುನ: ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಉದ್ಯೋಗದಲ್ಲಿ ಅಭಿವೃದ್ಧಿ ಇರುವುದು. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಲೆಕ್ಕಾಚಾರ ತಪ್ಪದಂತೆ ಎಚ್ಚರವಹಿಸಿರಿ.ಮನೆಯಲ್ಲಿ ಮಂಗಲಕಾರ್ಯ ಜರುಗುವದು. ಶುಭ ಸಂಖ್ಯೆ: 1

ಕಟಕ: ಕೆಲಸಗಳು ನಿಧಾನಗತಿಯಲ್ಲಿ ಸಾಗುವವು ಸೂಕ್ಷ್ಮತೆಯಿಂದ ವ್ಯವಹರಿಸಿರಿ. ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ಮನೋಚಿಂತಿತ ಕಾರ್ಯ ಕೈಗೂಡುವದು. ಹಳೆಯ ಸಾಲ ತೀರುವುದು. ಶುಭ ಸಂಖ್ಯೆ: 8

ಸಿಂಹ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ.ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವದು. ಶುಭ ಸಂಖ್ಯೆ: 5

ಕನ್ಯಾ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ.ವ್ಯಾಪಾರವೃದ್ಧಿಯಾಗುವದು. ಆರ್ಥಿಕ ಸಂಕಷ್ಟ ದೂರಾಗುವದು. ಶುಭ ಸಂಖ್ಯೆ: 4

ತುಲಾ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 8

ವೃಶ್ಚಿಕ: ಸಹನೆ ಇಲ್ಲದ ಆತುರದ ನಡೆಯಿಂದ ಹಾನಿ ಸಂಭವ ಎಚ್ಚರಿಕೆ ವಹಿಸಿರಿ. ಅನೀರೀಕ್ಷಿತವಾಗಿ ಬರುವ ವಿಘ್ನಗಳು ತಾವಾಗಿಯೇ ಪರಿಹಾರ ಕಾಣುವವು. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಶುಭ ಸಂಖ್ಯೆ: 2

ಧನ: ಮನಸ್ಸಿನಂತೆಯೇ ಎಲ್ಲ ಕೆಲಸಗಳೂ ಪೂರ್ಣವಾಗುವವು. ಉದ್ಯೋಗಸ್ಥಾನದಲ್ಲಿ ಕಾರ್ಯಭಾರ ಹೆಚ್ಚುವದು. ಆಸ್ತಿ ಸಂಬಂಧಿತ ವಿಷಯದಲ್ಲಿ ವಂಚನೆಯಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತೋಷದ ಕಾರ್ಯಗಳು ನೆರವೇರುವವು. ಶುಭ ಸಂಖ್ಯೆ: 6

ಮಕರ: ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಶುಭ ಸಂಖ್ಯೆ: 7

ಕುಂಭ: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 3

ಮೀನ: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 3

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937