Horoscope Today: ದಿನ ಭವಿಷ್ಯ; ಕಟಕ ರಾಶಿಯವರಿಗೆ ವಸ್ತು-ವಾಹನ-ಆಸ್ತಿ ಖರೀದಿ ಯೋಗವಿದೆ

| Updated By: Digi Tech Desk

Updated on: Oct 05, 2021 | 9:10 AM

Horoscope ಅಕ್ಟೋಬರ್ 05, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today: ದಿನ ಭವಿಷ್ಯ; ಕಟಕ ರಾಶಿಯವರಿಗೆ ವಸ್ತು-ವಾಹನ-ಆಸ್ತಿ ಖರೀದಿ ಯೋಗವಿದೆ
ದಿನ ಭವಿಷ್ಯ
Follow us on

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಕೃಷ್ಣಪಕ್ಷ, ಚತುರ್ದಶಿ ತಿಥಿ, ಮಂಗಳವಾರ, ಅಕ್ಟೋಬರ್ 05, 2021. ಉತ್ತರೆ ನಕ್ಷತ್ರ, ರಾಹುಕಾಲ: ಇಂದು ಸಂಜೆ 3.02 ರಿಂದ ಇಂದು ಸಂಜೆ 4.31ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.06. ಸೂರ್ಯಾಸ್ತ: ಸಂಜೆ 6.02

ತಾ.05-10-2021 ರ ಮಂಗಳವಾರದ ರಾಶಿಭವಿಷ್ಯ.

ಮೇಷ: ಗುರಿಸಾಧನೆಗೆ ಇದು ಸೂಕ್ತ ಸಮಯ. ಪ್ರಯತ್ನಿಸಿದ ಕಾರ್ಯಗಳು ಕೈಗೂಡುವುದು. ವಿದ್ಯಾರ್ಥಿಗಳಿಗೆ ಉನ್ನತ ಪ್ರಶಸ್ತಿ ದೊರಕುವ ಸಾಧ್ಯತೆ ಇರುವುದು. ಶುಭ ಸಂಖ್ಯೆ: 5

ವೃಷಭ: ಉದರಬೇನೆ ಬರುವ ಸಾಧ್ಯತೆ ಇದೆ ಆರೋಗ್ಯದ ಕಾಳಜಿವಹಿಸಿ. ಬಂಧುಮಿತ್ರರ ಭೇಟಿ, ಮನೆಯಲ್ಲಿ ಮಂಗಲಕಾರ್ಯ ಜರುಗುವ ಯೋಗವಿದೆ. ಕೋರ್ಟ್ನಲ್ಲಿರುವ ವ್ಯಾಜ್ಯಗಳು ಕೊನೆಗೊಳ್ಳುವವು. ಶುಭ ಸಂಖ್ಯೆ: 1

ಮಿಥುನ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು. ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ. ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು. ಶುಭ ಸಂಖ್ಯೆ: 9

ಕಟಕ: ವಸ್ತು-ವಾಹನ-ಆಸ್ತಿ ಖರೀದಿ ಯೋಗವಿದೆ. ಅನವಶ್ಯಕ ಅಲೆದಾಟದ ಸಾಧ್ಯತೆ ಇದೆ. ಮನೆಯ ಹಿರಿಯರ ಆರೋಗ್ಯದ ಚಿಂತೆ ಇರುವುದು. ಬುದ್ಧಿವಂತಿಕೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 6

ಸಿಂಹ: ಸ್ವಪ್ರತಿಷ್ಟೆ ಬಿಟ್ಟು ಬಲ್ಲವರ ಸಹಾಯ ಪಡೆಯಿರಿ. ಮರೆತು ಹೋದ ವಸ್ತು ಲಾಭದಾಯಕವಾಗಿ ಪರಿಣಮಿಸುವುದು. ಹಳೆಯ ಮಿತ್ರರ ಒಡನಾಟ ಸಂತಸ ತರುವುದು. ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆ ಇರುವುದು. ಶುಭ ಸಂಖ್ಯೆ: 2

ಕನ್ಯಾ: ಭವಿಷ್ಯತ್ತಿನ ಉಪೇಕ್ಷೆ ಮಾಡದೇ ಉಳಿತಾಯಕ್ಕೆ ಗಮನಹರಿಸಿರಿ. ಆಪತ್ತುಗಳ ಪರಿಹಾರಕ್ಕಾಗಿ ವ್ಯಥಾ ತಿರುಗಾಟದ ಸಂಭವವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭ ಸಂಖ್ಯೆ: 8

ತುಲಾ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 3

ವೃಶ್ಚಿಕ: ಧನಾರ್ಜನೆಯ ಮಾರ್ಗವು ಶ್ರೇಷ್ಠ ಮಟ್ಟದಲ್ಲಿದ್ದು, ಐಶ್ವರ್ಯ ಸಮೃದ್ಧಿಯಾಗುತ್ತದೆ. ಸಂಸಾರಿಕ ದೃಷ್ಟಿಯಲ್ಲೂ ಸುಖ, ಸಂಭ್ರಮಗಳಿದ್ದು ತೃಪ್ತಿ ಲಭಿಸಿದರೂ ಶತ್ರುಜನರ ಪೀಡೆ ಅಧಿಕವಾಗುತ್ತದೆ. ಅನಿವಾರ್ಯ ಪ್ರವಾಸ ಸಾಧ್ಯತೆ ಇದೆ. ಶುಭ ಸಂಖ್ಯೆ: 7

ಧನು: ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವುದು. ಶುಭ ಸಂಖ್ಯೆ: 4

ಮಕರ: ಅಲ್ಪ ತೃಪ್ತಿ, ವ್ಯಾಪಾರದಲ್ಲಿ ನಿರಾಸಕ್ತಿ, ಅಪೇಕ್ಷಿತ ಕೆಲಸಗಳು ನೆರವೇರುವವು, ಧನಲಾಭ, ವಿದ್ಯಾರ್ಥಗಳು, ಶಿಕ್ಷಕರು ಹಾಗೂ ಹಿರಿಯರಿಗೆ ಕೀರ್ತಿದಾಯಕ. ಆಲಸ್ಯದಿಂದ ತೊಂದರೆ ಇರುವುದು ಗುರುಸ್ತೋತ್ರ ಪಾರಾಯಣ ಮಾಡಿರಿ. ಶುಭ ಸಂಖ್ಯೆ: 9

ಕುಂಭ: ಅಪೇಕ್ಷಿಸಿದ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಳ್ಳುವವು ಆಸ್ತಿ ವಿವಾದ ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ, ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು. ಸಭಾಸಮಾಜ ಕೀರ್ತಿ ಲಭಿಸುವುದು. ಶುಭ ಸಂಖ್ಯೆ: 3

ಮೀನ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ. ಶುಭ ಸಂಖ್ಯೆ: 6

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

Published On - 6:42 am, Tue, 5 October 21