AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ

Horoscope ಅಕ್ಟೋಬರ್ 06, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ
ದಿನ ಭವಿಷ್ಯ
TV9 Web
| Updated By: preethi shettigar|

Updated on: Oct 06, 2021 | 7:03 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಕೃಷ್ಣಪಕ್ಷ, ಅಮಾವಾಸ್ಯೆ ತಿಥಿ, ಬುಧವಾರ, ಅಕ್ಟೋಬರ್ 06, 2021. ಹಸ್ತ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.04 ರಿಂದ ಇಂದು ಮಧ್ಯಾಹ್ನ 1.33ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.07. ಸೂರ್ಯಾಸ್ತ: ಸಂಜೆ 6.01

ತಾ.06-10-2021 ರ ಬುಧವಾರದ ರಾಶಿಭವಿಷ್ಯ.

ಮೇಷ: ಶುಭ ದಿನವಾಗಲಿದೆ. ಕೆಲಸದಲ್ಲಿ ಅಭಿವೃದ್ಧಿ ಇದೆ. ಹಣಕಾಸಿನ ವ್ಯವಹಾರವನ್ನು ತಾಳ್ಮೆಯಿಂದ ನಿಭಾಯಿಸಿ. ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಮಂಗಲ ಕಾರ್ಯ ಜರುಗುವವು. ಶುಭ ಸಂಖ್ಯೆ: 9

ವೃಷಭ: ಪರಿವಾರದಲ್ಲಿ ಹೊಸಕಳೆ ಬರುವುದು. ಕುಟುಂಬದಲ್ಲಿ ಸೌಖಯ ಇರುವುದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು. ಶುಭ ಸಂಖ್ಯೆ: 4

ಮಿಥುನ: ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವುದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ. ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು. ಶುಭ ಸಂಖ್ಯೆ: 6

ಕಟಕ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 8

ಸಿಂಹ: ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವುದು. ಮಾನಸಿಕ ಉತ್ಸಾಹ ಕಂಡುಬರುವುದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವುದು. ಕಾರಣಾಂತರ ಅಧಿಕ ಖರ್ಚುಬರಬಹುದು. ಶುಭ ಸಂಖ್ಯೆ: 5

ಕನ್ಯಾ: ಮಾತಿನಂತೆ ನಡೆದುಕೊಳ್ಳುವ ಪ್ರಯತ್ನ ಮಾಡುವಿರಿ. ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಕೆಲಸ ನಿರ್ವಹಿಲು ಆಗದಂತಹ ಸ್ಥಿತಿ ಬರಬಹುದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 3

ತುಲಾ: ನಿಶ್ಚಿತ ಕೆಲಸಕ್ಕೆ ಬೆಂಬಲ ಸಿಗುವುದರಿಂದ ಉತ್ತಮ ಫಲ ದೊರೆಯುವುದು. ಸುಮ್ಮನೇ ಕೂಡದ ಜಾಯಮಾನ ಇರುವುದರಿಂದ ಹೊಸ ಯೋಜನೆಯನ್ನು ರೂಪಿಸುವಿರಿ. ಹಿಂದಿನ ಬಾಕಿ ವಸೂಲಾತಿಗೆ ಶ್ರಮಿಸಬೇಕಾಗುವುದು. ಶುಭ ಸಂಖ್ಯೆ: 1

ವೃಶ್ಚಿಕ: ಕುಟುಂಬದಲ್ಲಿ ಮನಸ್ತಾಪ ಕಂಡುಬರುವುದು. ಗೌಪ್ಯ ವ್ಯವಹಾರಗಳನ್ನು ಸರಿದೂಗಿಸಲು ಸಾಧ್ಯವಾಗದೇ ಪರಿತಪಿಸುವಿರಿ. ಆಸಕ್ತಿ ಆಪತ್ತು ತರುವ ಸಂಭವವಿದೆ. ಮಹತ್ವದ ನಿರ್ಧಾರಗಳಿಗೆ ಇದು ಸೂಕ್ತಕಾಲವಲ್ಲ. ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 7

ಧನು: ಧಾರ್ಮಿಕ ಕ್ಷೇತ್ರದಲ್ಲಿ ಗೌರವ ಸಮ್ಮಾನಗಳು ದೊರೆಯುವವು. ಅತಿಯಾದ ನಿರೀಕ್ಷೆಯಿಂದ ಅಸಮಾಧಾನ ಕಂಡುಬರುವುದು. ದೂರುವವರೇ ಹೊಗಳಿದರೂ ನೆಮ್ಮದಿ ಇರಲಾರದು. ಸ್ವಯಂ ಪ್ರತಿಷ್ಟೆಗೆ ಧನವ್ಯಯ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 4

ಮಕರ: ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವುದು. ಶುಭ ಸಂಖ್ಯೆ: 7

ಕುಂಭ: ತಾಪತ್ರಯಗಳೆಲ್ಲ ದೂರವಾಗಿದ್ದು ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತದೆ. ವ್ಯಾಪಾರಾದಿ ಉದ್ಯಮಗಳು ಇಷ್ಟದಂತೆ ನಡೆಯುತ್ತದೆ. ಕೆಲವೊಮ್ಮೆ ಸಣ್ಣ ವಿಷಯಗಳಿಗೂ ಭಯ ತೋರಿದರೂ ಹಾನಿಯಿಲ್ಲ. ಶುಭ ಸಂಖ್ಯೆ: 2

ಮೀನ: ಆಗುವುದೆಲ್ಲ ಒಳಿತೆಂಬ ಭಾವನೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ. ಮಹಿಳೆಯರಿಗೆ ಮನೆಯಲ್ಲಿನ ಆಂತರಿಕ ವಿರಸ ನೀಗಿ ಸೌಹಾರ್ದತೆ. ನೂತನ ವಿವಾದ ಹುಟ್ಟುಹಾಕದ ಹಾಗೆ ತಾಳ್ಮೆಯಡಿ ವರ್ತನೆ. ಶುಭ ಸಂಖ್ಯೆ: 5

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್