AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ

Horoscope ಅಕ್ಟೋಬರ್ 07, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ
ದಿನ ಭವಿಷ್ಯ
TV9 Web
| Updated By: shruti hegde|

Updated on: Oct 07, 2021 | 7:05 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಶರದೃತು, ಶುಕ್ಲಪಕ್ಷ, ಪಾಡ್ಯ ತಿಥಿ, ಗುರುವಾರ, ಅಕ್ಟೋಬರ್ 07, 2021. ಚಿತ್ತೆ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.32 ರಿಂದ ಇಂದು ಸಂಜೆ 3.01ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.07. ಸೂರ್ಯಾಸ್ತ: ಸಂಜೆ 6.00

ತಾ.07-10-2021 ರ ಗುರುವಾರದ ರಾಶಿಭವಿಷ್ಯ

ಮೇಷ: ಜನಮನ್ನಣೆ ದೊರೆಯಲಿದೆ. ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 7

ವೃಷಭ: ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವುದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ. ಆರೋಗ್ಯದ ಸೂಕ್ತ ಕಾಳಜಿ ವಹಿಸಿರಿ. ಶುಭ ಸಂಖ್ಯೆ: 1

ಮಿಥುನ: ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಗಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ. ಶತ್ರುಬಾಧೆ ಕಂಡುಬರುವದು. ಆರೋಗ್ಯದ ಮೇಲೆ ನಿಗಾ ಇರಲಿ. ಶುಭ ಸಂಖ್ಯೆ: 9

ಕಟಕ: ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 4

ಸಿಂಹ: ಸಾಲಗಾರರ ತೊಂದರೆ ಇರುವದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ. ಶುಭ ಸಂಖ್ಯೆ: 5

ಕನ್ಯಾ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು. ಶುಭ ಸಂಖ್ಯೆ: 3

ತುಲಾ: ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 9

ವೃಶ್ಚಿಕ: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 4

ಧನು: ಹಿರಿಯರ ಮಾರ್ಗದರ್ಶನ ದೊರೆಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವುದು. ಶುಭ ಸಂಖ್ಯೆ: 8

ಮಕರ: ದಿಟ್ಟತನ, ಮನೋಸ್ಥೈರ್ಯ, ನೇರ,ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವುದು. ಶುಭ ಸಂಖ್ಯೆ: 2

ಕುಂಭ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ. ಶುಭ ಸಂಖ್ಯೆ: 1

ಮೀನ: ಆಗುವುದೆಲ್ಲ ಒಳಿತೆಂಬ ಭಾವನೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ. ಮಹಿಳೆಯರಿಗೆ ಮನೆಯಲ್ಲಿನ ಆಂತರಿಕ ವಿರಸ ನೀಗಿ ಸೌಹಾರ್ದತೆ. ನೂತನ ವಿವಾದ ಹುಟ್ಟುಹಾಕದ ಹಾಗೆ ತಾಳ್ಮೆಯಡಿ ವರ್ತನೆ. ಶುಭ ಸಂಖ್ಯೆ: 6

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್
ಮ್ಯಾಟ್ ಹೆನ್ರಿ ಮಾರಕ ದಾಳಿ: 20 ಎಸೆತಗಳಲ್ಲಿ 16 ಡಾಟ್ ಬಾಲ್, 2 ವಿಕೆಟ್
ಮ್ಯಾಟ್ ಹೆನ್ರಿ ಮಾರಕ ದಾಳಿ: 20 ಎಸೆತಗಳಲ್ಲಿ 16 ಡಾಟ್ ಬಾಲ್, 2 ವಿಕೆಟ್
Daily Devotional: ಅನಾರೋಗ್ಯದಿಂದ ಪಾರಾಗಲು ಏನು ಮಾಡಬೇಕು ಗೊತ್ತಾ?
Daily Devotional: ಅನಾರೋಗ್ಯದಿಂದ ಪಾರಾಗಲು ಏನು ಮಾಡಬೇಕು ಗೊತ್ತಾ?