AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಯಾವುದೇ ಅಡೆತಡೆ ಇಲ್ಲದೆ ನಿರಾತಂಕ ಜೀವನ ಇರುವುದು

Horoscope ಅಕ್ಟೋಬರ್ 09, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಯಾವುದೇ ಅಡೆತಡೆ ಇಲ್ಲದೆ ನಿರಾತಂಕ ಜೀವನ ಇರುವುದು
ದಿನ ಭವಿಷ್ಯ
TV9 Web
| Updated By: Vinay Bhat|

Updated on: Oct 09, 2021 | 6:42 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಶರದೃತು, ಶುಕ್ಲಪಕ್ಷ, ತದಿಗೆ ತಿಥಿ, ಶನಿವಾರ, ಅಕ್ಟೋಬರ್ 09, 2021. ವಿಶಾಖ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9.05 ರಿಂದ ಇಂದು ಬೆಳಿಗ್ಗೆ 10.34 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.07. ಸೂರ್ಯಾಸ್ತ: ಸಂಜೆ 5.59

ತಾ.09-10-2021 ರ ಶನಿವಾರದ ರಾಶಿಭವಿಷ್ಯ.

ಮೇಷ: ಯಾವುದೇ ಅಡೆತಡೆ ಇಲ್ಲದೆ ನಿರಾತಂಕ ಜೀವನ ಇರುವುದು. ಸಾಮಾಜಿಕ ಕಾರ್ಯಗಳಿಂದ ಗೌರವಾದರಗಳು ದೊರೆಯುವವು. ಆಶೆಗೆ ತಕ್ಕಂತೆ ಫಲಗಳು ಕೈಗೂಡುವವು. ಬಂಧುಗಳಲ್ಲಿ ಮನಸ್ತಾಪ ಕಂಡುಬರುವುದು. ಶುಭ ಸಂಖ್ಯೆ: 6

ವೃಷಭ: ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವುದು. ಶಾಂತಿ, ನೆಮ್ಮದಿಯುಕ್ತ ಜೀವನ ಇರುವುದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವುದರಿಂದ ಗುರಿ ಮುಟ್ಟುವುದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 6

ಮಿಥುನ: ದೂರಾಲೋಚನೆ ಮಾಡಿ ಕಾರ್ಯ ನಿರ್ವಹಿಸಿರಿ. ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವುದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ನೆಮ್ಮದಿಯ ಜೀವನ ಇರುವುದು. ಉದ್ಯೋಗವನ್ನು ವಿಸ್ತರಿಸುವ ಕಾಲ ಇರುವುದು. ಶುಭ ಸಂಖ್ಯೆ: 9

ಕಟಕ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು. ಶುಭ ಸಂಖ್ಯೆ: 1

ಸಿಂಹ: ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 5

ಕನ್ಯಾ: ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಅನಿವಾರ್ಯ ಕೆಲಸಗಳಗೆ ಅಲೆದಾಟ ಕಂಡುಬರುವುದು. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 7

ತುಲಾ: ಆರೋಗ್ಯಕ್ಕೆ ಸಂಬಂಧಿಸಿದ ವಿಪತ್ತಿನಿಂದ ಪಾರಾಗುವಿರಿ. ಕಷ್ಟದ ಸಮಯದಲ್ಲಿಯೂ ಸಂಯಮ ಕಳೆದುಕೊಳ್ಳದೇ ಮುಂದುವರೆಯುವಿರಿ. ಉದ್ಯೋಗದಲ್ಲಿ ವರ್ಗಾವಣೆಯ ಯೋಗವಿದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ಶುಭ ಸಂಖ್ಯೆ: 2

ವೃಶ್ಚಿಕ: ಸಹನೆ ಇಲ್ಲದ ಆತುರದ ನಡೆಯಿಂದ ಹಾನಿ ಸಂಭವ ಎಚ್ಚರಿಕೆ ವಹಿಸಿರಿ. ಅನೀರೀಕ್ಷಿತವಾಗಿ ಬರುವ ವಿಘ್ನಗಳು ತಾವಾಗಿಯೇ ಪರಿಹಾರ ಕಾಣುವವು. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಶುಭ ಸಂಖ್ಯೆ: 8

ಧನು: ಧನಾರ್ಜನೆಯ ಮಾರ್ಗವು ಶ್ರೇಷ್ಠ ಮಟ್ಟದಲ್ಲಿದ್ದು, ಐಶ್ವರ್ಯ ಸಮೃದ್ಧಿಯಾಗುತ್ತದೆ. ಸಂಸಾರಿಕ ದೃಷ್ಟಿಯಲ್ಲೂ ಸುಖ, ಸಂಭ್ರಮಗಳಿದ್ದು ತೃಪ್ತಿ ಲಭಿಸಿದರೂ ಶತ್ರುಜನರ ಪೀಡೆ ಅಧಿಕವಾಗುತ್ತದೆ. ಅನಿವಾರ್ಯ ಪ್ರವಾಸ ಸಾಧ್ಯತೆ ಇದೆ. ಶುಭ ಸಂಖ್ಯೆ: 3

ಮಕರ: ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ್ಗ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭ ಸಂಖ್ಯೆ: 6

ಕುಂಭ: ಆರೋಗ್ಯಪೂರ್ಣತೆ, ಪ್ರಸನ್ನತೆ ಇರುವುದು. ಎಲ್ಲ ಕಾರ್ಯಗಳೂ ತಮ್ಮ ಮನಸ್ಸಿನಂತೆ ನಡೆಯುವವು. ಧನಲಾಭ, ಧಾರ್ಮಿಕ ಕಾರ್ಯ, ದೇವತಾ ಕ್ಷೇತ್ರ ದರ್ಶನ ಯೋಗವಿರುವದು. ವ್ಯಾಪಾರ ಸಾಧಾರಣ. ಶುಭ ಸಂಖ್ಯೆ: 4

ಮೀನ: ದೂರ ಪ್ರಯಾಣದ ಅವಶ್ಯಕತೆ ಕಂಡುಬರುವುದು. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ಅನೇಕ ರೀತಿಯ ಸೌಭಾಗ್ಯಗಳು ದೊರೆಯುವವು.ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ಮಶಿನರಿಗಳಿಂದ ತೊಂದರೆ ಸಾಧ್ಯತೆ ಇದೆ. ಶುಭ ಸಂಖ್ಯೆ: 9

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್