Horoscope Today – ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು?

ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಋತು: ಶರದೃತು, ಕೃಷ್ಣಪಕ್ಷ, ದ್ವಾದಶಿ ತಿಥಿ, ಭಾನುವಾರ, ಅಕ್ಟೋಬರ್​ 10, 2021ರ ಭವಿಷ್ಯ.

Horoscope Today - ದಿನ ಭವಿಷ್ಯ; ಭಾನುವಾರದ ಭವಿಷ್ಯದಲ್ಲಿ ಯಾರಿಗೆ ಒಳಿತು?
ದಿನ ಭವಿಷ್ಯ

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಋತು: ಶರದೃತು, ಕೃಷ್ಣಪಕ್ಷ, ದ್ವಾದಶಿ ತಿಥಿ, ಭಾನುವಾರ, ಅಕ್ಟೋಬರ್​ 10, 2021. ಅನೂರಾಧ ನಕ್ಷತ್ರ, ರಾಹುಕಾಲ: ಇಂದು ಸಂಜೆ 4:29ರಿಂದ ಇಂದು ಸಂಜೆ 5:57 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.06. ಸೂರ್ಯಾಸ್ತ: ಸಂಜೆ 6.09.

ತಾ.10-10-2021 ರ ಭಾನುವಾರದ ರಾಶಿ ಭವಿಷ್ಯ.

ಮೇಷ: ಅಪೇಕ್ಷಿಸಿದ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಳ್ಳುವವು ಆಸ್ತಿ ವಿವಾದ ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ,ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು.ಸಭಾಸಮಾಜ ಕೀರ್ತಿ ಲಭಿಸುವುದು.
ಶುಭ ಸಂಖ್ಯೆ: 6

ವೃಷಭ: ಗುರಿಸಾಧನೆಗೆ ಇದು ಸೂಕ್ತ ಸಮಯ. ಪ್ರಯತ್ನಿಸಿದ ಕಾರ್ಯಗಳು ಕೈಗೂಡುವವು. ವಿದ್ಯಾರ್ಥಿಗಳಿಗೆ ಉನ್ನತ ಪ್ರಶಸ್ತಿ ದೊರಕುವ ಸಾಧ್ಯತೆ ಇರುವದು.
ಶುಭ ಸಂಖ್ಯೆ: 9

ಮಿಥುನ: ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವದು. ವಾದ-ವಿವಾದ, ಹಠಸಾಧನೆ ಬೇಡ.
ಶುಭ ಸಂಖ್ಯೆ: 1

ಕರ್ಕ: ವಾದ-ವಿವಾದ, ಹಠಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ.
ಶುಭ ಸಂಖ್ಯೆ: 7

ಸಿಂಹ: ಮಾತಿನಂತೆ ನಡೆದುಕೊಳ್ಳುವ ಪ್ರಯತ್ನ ಮಾಡುವಿರಿ. ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಕೆಲಸ ನಿರ್ವಹಿಲು ಆಗದಂತಹ ಸ್ಥಿತಿ ಬರಬಹುದು. ಎಚ್ಚರಿಕೆವಹಿಸಿರಿ.
ಶುಭ ಸಂಖ್ಯೆ: 4

ಕನ್ಯಾ: ಧಾರ್ಮಿಕ ಕ್ಷೇತ್ರದಲ್ಲಿ ಗೌರವ ಸಮ್ಮಾನಗಳು ದೊರೆಯುವವು. ಅತಿಯಾದ ನಿರೀಕ್ಷೆಯಿಂದ ಅಸಮಾಧಾನ ಕಂಡುಬರುವದು. ದೂರುವವರೇ ಹೊಗಳಿದರೂ ನೆಮ್ಮದಿ ಇರಲಾರದು. ಸ್ವಯಂ ಪ್ರತಿಷ್ಟೆಗೆ ಧನವ್ಯಯ ಆಗುವ ಸಾಧ್ಯತೆ ಇದೆ.
ಶುಭ ಸಂಖ್ಯೆ: 8

ತುಲಾ: ಆರ್ಥಿಕ ಸ್ಥಿತಿ ಸುಧಾರಿಸುವದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವದು. ಜೀವನ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ.
ಶುಭ ಸಂಖ್ಯೆ: 5

ವೃಶ್ಚಿಕ: ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ.ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು.
ಶುಭ ಸಂಖ್ಯೆ: 3

ಧನು: ಕುಟುಂಬದಲ್ಲಿ ಭಿನ್ನಾಭಿಪ್ರಾಯ ಇರುವದು. ವೈವಾಹಿಕ ಚಿಂತೆ ಇರುವದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ.ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ
ಶುಭ ಸಂಖ್ಯೆ: 9

ಮಕರ: ಸ್ವಪ್ರತಿಷ್ಟೆ ಬಿಟ್ಟು ಬಲ್ಲವರ ಸಹಾಯ ಪಡೆಯಿರಿ. ಮರೆತು ಹೋದ ವಸ್ತು ಲಾಭದಾಯಕವಾಗಿ ಪರಿಣಮಿಸುವದು. ಹಳೆಯ ಮಿತ್ರರ ಒಡನಾಟ ಸಂತಸ ತರುವದು. ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆ ಇರುವದು.
ಶುಭ ಸಂಖ್ಯೆ: 4

ಕುಂಭ: ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ.
ಶುಭ ಸಂಖ್ಯೆ: 7

ಮೀನ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವದು.
ಶುಭ ಸಂಖ್ಯೆ: 2

 

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Read Full Article

Click on your DTH Provider to Add TV9 Kannada