ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಶರದೃತು, ಶುಕ್ಲಪಕ್ಷ, ಷಷ್ಠಿ ತಿಥಿ, ಸೋಮವಾರ, ಅಕ್ಟೋಬರ್ 11, 2021. ಜ್ಯೇಷ್ಠ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.36 ರಿಂದ ಇಂದು ಬೆಳಿಗ್ಗೆ 9.04 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.08. ಸೂರ್ಯಾಸ್ತ: ಸಂಜೆ 5.57
ತಾ.11-10-2021 ರ ಸೋಮವಾರದ ರಾಶಿಭವಿಷ್ಯ.
ಮೇಷ: ವ್ಯಾಪಾರದಲ್ಲಿ ಅದೃಷ್ಟಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವುದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಶುಭ ಸಂಖ್ಯೆ: 9
ವೃಷಭ: ಮನೆಯಲ್ಲಿ ಅಸಮಾಧಾನ ಇರುವುದು. ಕೂಡಿಟ್ಟ ಹಣ ಹಾನಿಯಾಗುವ ಸಂಭವವಿದೆ. ಅಣ್ಣತಮ್ಮಂದಿರಲ್ಲಿ ಸಹಕಾರ ಅತ್ಯಂತ ಅವಶ್ಯಕ. ತೋಟಗಾರಿಕೆ ಫಲಪ್ರದವಾಗಲಿದೆ. ವ್ಯಾಪಾರ ವೃದ್ಧಿಯಾಗುವುದು. ಶುಭ ಸಂಖ್ಯೆ: 1
ಮಿಥುನ: ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಉದ್ಯೋಗದಲ್ಲಿ ಅಭಿವೃದ್ಧಿ ಇರುವುದು. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಲೆಕ್ಕಾಚಾರ ತಪ್ಪದಂತೆ ಎಚ್ಚರವಹಿಸಿರಿ. ಮನೆಯಲ್ಲಿ ಮಂಗಲಕಾರ್ಯ ಜರುಗುವುದು. ಶುಭ ಸಂಖ್ಯೆ: 5
ಕಟಕ: ಸಹನೆ ಇಲ್ಲದ ಆತುರದ ನಡೆಯಿಂದ ಹಾನಿ ಸಂಭವ ಎಚ್ಚರಿಕೆ ವಹಿಸಿರಿ. ಅನೀರೀಕ್ಷಿತವಾಗಿ ಬರುವ ವಿಘ್ನಗಳು ತಾವಾಗಿಯೇ ಪರಿಹಾರ ಕಾಣುವವು. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಶುಭ ಸಂಖ್ಯೆ: 8
ಸಿಂಹ: ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಕ ಸಂಕಷ್ಟಗಳು ಎದುರಾಗುವವು. ಶುಭ ಸಂಖ್ಯೆ: 3
ಕನ್ಯಾ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 7
ತುಲಾ: ಅನಿರೀಕ್ಷಿತ ಸಂಚಾರ ಒದಗಿಬಂದರೂ ತೃಪ್ತಿದಾಯಕವೆನ್ನಬಹುದು. ವ್ಯಾಪಾರಾದಿ ಉದ್ಯಮಗಳಲ್ಲಿ ಅಪೇಕಿಸಿದಂತೆ ಪ್ರಗತಿ. ಲಾಭ ತೋರಿಬರುತ್ತದೆ. ಹೊಸದಾದ ಆಲೋಚನಾ ಸಿದ್ಧಿ. ವಿಪರೀತ ಖರ್ಚು. ಶುಭ ಸಂಖ್ಯೆ: 2
ವೃಶ್ಚಿಕ: ಸ್ವಜನರಲ್ಲಿ ಮನಸ್ತಾಪ. ದೇಹಾರೋಗ್ಯವೂ ಸರಿಯಿರದೆ ತಾಪದಾಯಕವಾಗುತ್ತದೆ. ಆದರೆ ಶ್ರೇಷ್ಠ ಜನರಿಂದ ಪುರಸ್ಕಾರ. ಸಾಂಸಾರಿಕ ದೃಷ್ಟಿಯಲ್ಲೂ ತೃಪ್ತಿದಾಯಕವಿದ್ದು ನೆಮ್ಮದಿ ಉಂಟಾಗುತ್ತದೆ. ಶುಭ ಸಂಖ್ಯೆ: 6
ಧನು: ಅಲ್ಪ ತೃಪ್ತಿ, ವ್ಯಾಪಾರದಲ್ಲಿ ನಿರಾಸಕ್ತಿ, ಅಪೇಕ್ಷಿತ ಕೆಲಸಗಳು ನೆರವೇರುವವು, ಧನಲಾಭ, ವಿದ್ಯಾರ್ಥಗಳು, ಶಿಕ್ಷಕರು ಹಾಗೂ ಹಿರಿಯರಿಗೆ ಕೀರ್ತಿದಾಯಕ. ಆಲಸ್ಯದಿಂದ ತೊಂದರೆ ಇರುವದು ಗುರುಸ್ತೋತ್ರ ಪಾರಾಯಣ ಮಾಡಿರಿ. ಶುಭ ಸಂಖ್ಯೆ: 6
ಮಕರ: ಆರೋಗ್ಯಪೂರ್ಣತೆ, ಪ್ರಸನ್ನತೆ ಇರುವದು. ಎಲ್ಲ ಕಾರ್ಯಗಳೂ ತಮ್ಮ ಮನಸ್ಸಿನಂತೆ ನಡೆಯುವವು. ಧನಲಾಭ, ಧಾರ್ಮಿಕ ಕಾರ್ಯ, ದೇವತಾ ಕ್ಷೇತ್ರ ದರ್ಶನ ಯೋಗವಿರುವುದು. ವ್ಯಾಪಾರ ಸಾಧಾರಣ. ಶುಭ ಸಂಖ್ಯೆ: 4
ಕುಂಭ: ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವದು. ಗುರುಬಲ ವೃದ್ಧಿಸುವುದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ಶುಭ ಸಂಖ್ಯೆ: 1
ಮೀನ: ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಬರುವುದು. ಕುಟುಂಬದ ಜವಾಬ್ದಾರಿ ಹೆಚ್ಚುವುದು. ಮಕ್ಕಳ ವಿದ್ಯಾಬ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವುದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ. ಶುಭ ಸಂಖ್ಯೆ: 3